
ಮಡಿಕೇರಿ ಮೇ.15(Nadubade news): ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಅರೆಭಾಷಿಕರ ಐನ್ಮನೆ ಕಾರ್ಯಕ್ರಮವು ಮಕ್ಕಂದೂರು ಗ್ರಾಮದ ಕುಂಭಗೌಡನ ಐನ್ಮನೆಯಲ್ಲಿ ಮೇ, 17 ರಂದು ಬೆಳಗ್ಗೆ 10.30 ಗಂಟೆಗೆ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಕುಂಭಗೌಡನ ಕುಟುಂಬದ ಪಟ್ಟೆದಾರರಾದ ಕೆ.ಕೆ.ಓಂಕಾರಪ್ಪ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಕರ್ನಾಟಕ ವಿಧಾನಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಮಕ್ಕಂದೂರು ಗ್ರಾ.ಪಂ.ಅಧ್ಯಕ್ಷರಾದ ಬಿ.ಎನ್.ರಮೇಶ್, ಮಕ್ಕಂದೂರು ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷರಾದ ಶಾಂತೆಯಂಡ ರವಿಕುಶಾಲಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ನಿರ್ದೇಶಕರಾದ ಕೋಳುಮುಡಿಯನ ಅನಂತ ಕುಮಾರ್, ಮಕ್ಕಂದೂರು ಗೌಡ ಸಮಾಜದ ಅಧ್ಯಕ್ಷರಾದ ಲಕ್ಕಪ್ಪನ ಕೆ.ಹರೀಶ, ಶಿವಮೊಗ್ಗ ಜಿಲ್ಲೆಯ ಅಬಕಾರಿ ಇಲಾಖೆಯ ಉಪ ಆಯುಕ್ತರಾದ ಸುಮಿತ ಕುಂಭಗೌಡನ ಕುಶಾಲಪ್ಪ-ನಂಗಾರು, ಪ್ರಗತಿಪರ ಕೃಷಿಕರಾದ ಸಂಪಾಜೆ ಇಂದಿರಾ ದೇವಿಪ್ರಸಾದ್ ಇತರರು ಪಾಲ್ಗೊಳ್ಳಲಿದ್ದಾರೆ. ಸುಳ್ಯದ ಸಾಹಿತಿ ಎ.ಕೆ.ಹಿಮಕರ ಅವರು ಅರೆಭಾಷೆ ಕುಟುಂಬಗಳ ಐನ್ಮನೆ ವಿಷಯ ಕುರಿತು ಉಪನ್ಯಾಸ ನೀಡಲಿದ್ದಾರೆ. ಅರವಿಂದ್ ಮಾಚಯ್ಯ ಕುಂಭಗೌಡನ ಅವರು ಕುಂಭಗೌಡನ ಐನ್ಮನೆ ನಡೆದು ಬಂದ ದಾರಿ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮೇ, 17 ರಂದು ಬೆಳಗ್ಗೆ 9.30 ಗಂಟೆಗೆ ಸುಳ್ಯ ಜಯಪ್ರಕಾಶ್ ಪೆರುಮುಂಡ ಮತ್ತು ತಂಡದವರಿಂದ ಅರೆಭಾಷೆ ಹಾಡುಗಳ ಕಲರವ, ಬೆಳಗ್ಗೆ 10 ಗಂಟೆಗೆ ಆರ್ಜೆ ತ್ರಿಶೂಲ್ ಕಂಬಳನೊಟ್ಟಿಗೆ ನೀವು, ಮಧ್ಯಾಹ್ನ 2.30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.