
ವಿರಾಜಪೇಟೆ, ಮಾ.06: ಕೊಡಗು ಜಿಲ್ಲಾ ಕಾಂಗ್ರೆಸ್ ವಿವಿಧ ಬ್ಲಾಕ್ ಮತ್ತು ಮುಂಚೂಣಿ ಘಟಕಗಳ ಅಧ್ಯಕ್ಷ ಸ್ಥಾನಗಳಿಗೆ ಆಸಕ್ತ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು, ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತೀತಿರ ದರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ಕೋರಿದ್ದಾರೆ.
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಆದೇಶದಂತೆ, ಕೊಡಗಿನಲ್ಲಿ ತಳಮಟ್ಟದಿಂದ ಪಕ್ಷ ಸಂಘಟಿಸಲು, ಎಲ್ಲಾ ಬ್ಲಾಕ್ ಕಾಂಗ್ರೆಸ್ ಹಾಗು ಮುಂಚೂಣಿ ಘಟಕ/ಸೆಲ್’ಗಳ ಅಧ್ಯಕ್ಷ ಸ್ಥಾನಗಳಿಗೆ ನೇಮಕಾತಿ ಮಾಡಬೇಕಿದ್ದು, ಆಸಕ್ತ ಕಾರ್ಯಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆದ್ದರಿಂದ ಬ್ಲಾಕ್ ಕಾಂಗ್ರೆಸ್ ಹಾಗು ಮುಂಚೂಣಿ ಘಟಕ/ಸೆಲ್’ಗಳ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ತಮ್ಮ ಅರ್ಜಿಯನ್ನು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ತಾರೀಕು 13 -03-2025 ರ ಒಳಗಾಗಿ ತಲುಪಿಸಬೇಕೆಂದು ದರ್ಮಜ ಉತ್ತಪ್ಪ ತಿಳಿಸಿದ್ದಾರೆ.