ಕೊಡ್ಲಿಪೇಟೆ, ಜೂ.18: (nadubadenews) ಕೊಡ್ಲಿಪೇಟೆಯಲ್ಲಿ ನೂತನವಾಗಿ ನಿರ್ಮಾಣವಾಗುವ ಡಾ ಎಪಿಜೆ ಅಬ್ದುಲ್ ಕಲಾಂ ವಸತಿ ವಿಜ್ಞಾನ ಕಾಲೇಜು ಕಟ್ಟಡಕ್ಕೆ ಮಡಿಕೇರಿ ಶಾಸಕ ಡಾ. ಮಂಥರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಸುಮಾರು ಏಳು ಕೋಟಿ ವೆಚ್ಚದ ಕಟ್ಟಡ ನಿರ್ಮಾಣವಾಗಲಿದ್ದು, ನಿಗಧಿತ ಸಮಯದಲ್ಲಿ, ಯೋಜನೆಯನ್ನು ಪೂರ್ಣಗೊಳಿಸಲು ಶಾಸಕರು ಸಂಬಂಧಿಸಿದವರಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾಜೀ ತಾಲೂಕು ಪಂಚಾಯತಿ ಅಧ್ಯಕ್ಷ ಲೋಕೇಶ್ ಕುಮಾರ್, ಕೆಡಿಪಿ ಸದಸ್ಯರು ಔರಂಗ್ ವೇದ ಕುಮಾರವರು, ಅಧಿಕಾರಿಗಳು, ಹಾಗೂ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ನಿಶಾರ್ ಅಚುಪ್ಪ ಮತ್ತು ಕಾಂಗ್ರೆಸ್ ಮುಖಂಡರು, ಸಾರ್ವಜನಿಕರು ಹಾಜರಿದ್ದರು.