ಮಡಿಕೇರಿ ಆ.08(Nadubade News): ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಕೊಡಗು ಜಿಲ್ಲಾ ಸಂಸ್ಥೆ, ಸ್ಥಳೀಯ ಸಂಸ್ಥೆ ಕುಶಾಲನಗರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕೂಡಿಗೆ ಗ್ರಾಮ ಪಂಚಾಯತ್, ನಂ.305ನೇ ಸೋಮವಾರಪೇಟೆ ತಾಲ್ಲೂಕು ಗಿರಿಜನ ದೊಡ್ಡ ಪ್ರಮಾಣದ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ ಬಸವನಹಳ್ಳಿ ಕುಶಾಲನಗರ ಮತ್ತು ಸೋಮವಾರಪೇಟೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಬುಡಕಟ್ಟು ದಿನಾಚರಣೆಯು ನಾಳೆ ಬೆಳಗ್ಗೆ 10 ಗಂಟೆಗೆ ಕುಶಾಲನಗರ ಕೂಡಿಗೆ ಬ್ಯಾಡಗೊಟ್ಟದಲ್ಲಿ ನಡೆಯಲಿದೆ.
ಕೂಡಿಗೆ ಗ್ರಾ.ಪಂ.ಅಧ್ಯಕ್ಷರಾದ ಕೆ.ಟಿ.ಗಿರೀಶ್, ಶಾಸಕರಾದ ಡಾ.ಮಂತರ್ ಗೌಡ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿ ಶುಭಾ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿ ಮ್ಯಾಥ್ಯೂ, ವಿದ್ಯಾರ್ಥಿ ಆದಿವಾಸಿ ಸಮುದಾಯದ ಸುರೇಶ್ ಜೆ.ಜಿ., ಸ್ಕೌಟ್ ಜಿಲ್ಲಾ ಆಯುಕ್ತರಾದ ಜಿಮ್ಮಿ ಸಿಕ್ವೇರಾ, ಪದ್ಮಶ್ರೀ ಪುರಸ್ಕøತರು ಹಾಗೂ ಗೈಡ್ಸ್ ಜಿಲ್ಲಾ ಆಯುಕ್ತರಾದ ರಾಣಿ ಮಾಚಯ್ಯ, ಕುಶಾಲನಗರ ಸ್ಥಳೀಯ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರವೀಣ್ ದೇವರಗುಂಡ ಸೋಮಪ್ಪ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.