ಮಡಿಕೇರಿ, ಜೂ.27(nadubadenews): ಮಡಿಕೇರಿ ನಗರದ ಸುದರ್ಶನ ವೃತ್ತದ ಬಳಿ ನಿರ್ಮಾಣವಾಗಿರುವ ನೂತನ ತಾಲ್ಲೂಕು ಪಂಚಾಯಿತಿ ಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ಬೋಸರಾಜು ಉದ್ಘಾಟಿಸಿದರು. ತಾಲ್ಲೂಕು ಪಂಚಾಯತ್ ಸಿಇಓ ಶೇಖರ್ ಅತಿಥಿ ಗಳಿಗೆ ನೂತನ ಕಟ್ಟಡದಲ್ಲಿರುವ ಕಚೇರಿಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಮುಖ್ಯಮಂತ್ರಿ ಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಧಿಕಾರದ ಅಧ್ಯಕ್ಷ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟರಾಜು, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಸೇರಿದಂತೆ ಕಚೇರಿ ಸಿಬ್ಬಂದಿಗಳು, ಸದಸ್ಯರು, ಮಾಜಿ ಅಧ್ಯಕ್ಷರು ಉಪಸ್ಥಿತರಿದ್ದರು.