ವಿರಾಜಪೇಟೆ, ಆ.05:(Nadubade News): ಕರ್ನಾಟಕ ಬ್ಯಾಡ್ಮಿಂಟನ್ ಸಂಸ್ಥೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಸಲಾದ ಯೋನೆಕ್ಸ್ ಸನ್ ರೈಸ್ ಕರ್ನಾಟಕ ರಾಜ್ಯ ಜೂನಿಯರ್ ಮತ್ತು ಸೀನಿಯರ್ ಬ್ಯಾಡ್ಮಿಂಟನ್ ಸ್ಪರ್ಧೆಯು ಜುಲೈ 27 ರಿಂದ ಆಗಸ್ಟ್ 2 ರವರೆಗೆ ನಡೆಯಿತು ಇದರಲ್ಲಿ 357 ಕರ್ನಾಟಕದ ಅತ್ಯುತ್ತಮ ಶ್ರೇಯಾಂಕಿತ ಆಟಗಾರರು ಪ್ರಶಸ್ತಿಗಾಗಿ ಸೆಣಸಾಡಿದರು ಇದರಲ್ಲಿ ದಿಯಾ ಭೀಮಯ್ಯ ಮೂರು ವಿಭಾಗದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದ್ದು ಪ್ರಸಂಶನೀಯ
19 ವರ್ಷದ ಬಾಲಕಿಯರ ಸಿಂಗಲ್ಸ್ ನಲ್ಲಿ ದ್ವಿತೀಯ ,ಮಿಕ್ಸ್ ಡಬಲ್ಸ್ ನಲ್ಲಿ ಪ್ರಥಮ ಹಾಗೂ ಸೀನಿಯರ್ ವಿಭಾಗದ ಡಬಲ್ಸ್ ನಲ್ಲಿ ದ್ವಿತೀಯ ಸ್ಥಾನ ಗಳಿಸಿರುತ್ತಾರೆ. ಕರ್ನಾಟಕದ ಪ್ರಥಮ ಶ್ರೇಯಾಂಕಿತ ಆಟಗಾರ್ತಿ ಡಬಲ್ಸ್ ವಿಭಾಗದಲ್ಲಿ ಬೆಂಗಳೂರಿನ ಅಶ್ವತಿ ವರ್ಗೀಸ್ ಹಾಗೂ ಮಿಶ್ರ ಡಬಲ್ಸ್ ನಲ್ಲಿ ಸುಮಿತ್.ಎ .ಆರ್ ಅವರೊಂದಿಗೆ ಆಡಿದರು ಇವರು ಮೈಸೂರಿನ ವಿದ್ಯಾಶ್ರಮ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ , ಮೈಸೂರಿನ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ಮೇದುರ ಅರುಣ್ ಪೆಮ್ಮಯ್ಯ ಅವರ ಬಳಿ ತರಬೇತಿ ಪಡೆಯುತ್ತಿದ್ದ ಇವರು ಪ್ರಸ್ತುತ ಭಾರತದ ಪ್ರತಿಷ್ಠಿತ ಬ್ಯಾಡ್ಮಿಂಟನ್ ಸಂಸ್ಥೆಯಾದ (NCE) ನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್ ಗೌಹಾಟಿ ಯಲ್ಲಿ (ಅಸ್ಸಾಂ) ತರಬೇತಿ ಪಡೆಯುತ್ತಿದ್ದಾರೆ.