
ಸೋಮವಾರಪೇಟೆ, ಮೇ.13(Nadubade News): ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು ಕಂಪ್ಯೂಟರ್ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ ಎಸಿಎ, ಬಿಇ ಇನ್ ಕಂಪ್ಯೂಟರ್ ಸೈನ್ಸ್, ಎಂ.ಎಸ್ಸಿ ಇನ್ ಕಂಪ್ಯೂಟರ್ ಸೈನ್ಸ್ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಮೇ, 15 ಕೊನೆಯ ದಿನವಾಗಿದೆ. ಅರ್ಜಿಯನ್ನು ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಬಸವನಹಳ್ಳಿ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು ದೂ.ಸಂ.9845659909 ವೇತನ 18,150, ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಎಂದು ಸೋಮವಾರಪೇಟೆ ಬಸವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ವಿಜ್ಞಾನ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.