ಬೆಂಗಳೂರು, ಮೇ.07 (ನಡುಬಾಡೆ ನ್ಯೂಸ್): ಪಹಲ್ಗಾಮ್‌ನ ಉಗ್ರ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ಭಯೋತ್ಪಾದಕರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಕಾರ್ಯಾಚರಣೆ ನಡೆಸಿದೆ. ಈ ಕಾರ್ಯಾಚರಣೆಗೆ ರಾಷ್ಟ್ರಾದ್ಯಂತ ಸಂಭ್ರಮ ಮತ್ತು ಶ್ಲಾಘನೆ ವ್ಯಕ್ತವಾಗಿದ್ದು, ಅನೇಕ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳನ್ನು ನಡೆಸಲಾಗಿದೆ. ಸಚಿವ ರಾಮಲಿಂಗಾರೆಡ್ಡಿ ಅವರು ರಾಜ್ಯದ ಎಲ್ಲ ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಧೈರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಭಾರತೀಯ ಸೈನ್ಯದ ಕಾರ್ಯಾಚರಣೆ ಬಗ್ಗೆ ನಮಗೆ ಯಾವಾಗಲೂ ಹೆಮ್ಮೆ ಇದೆ. ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಮತ್ತು ಜವಾಹರ್ ಲಾಲ್ ನೆಹರು ಅವರ ಅವಧಿಯಲ್ಲಿ ಪಾಕಿಸ್ತಾನ ಮತ್ತು ಚೀನಾ ವಿರದ್ಧ ನಡೆದ ಯುದ್ದದಲ್ಲೂ ಕೂಡ ನಮ್ಮ ಸೇನೆ ತಕ್ಕ ಹೀಗೆ ಕಾರ್ಯಾಚರಣೆ ನಡೆಸಿದೆ. ಪುಲ್ವಾಮಾ ಘಟನೆ ಆದಾಗಲೇ ಇದನ್ನ ಮಾಡಬೇಕಿತ್ತು. ಕೇಂದ್ರ ಸರ್ಕಾರದ ನಿಲುವನ್ನು ಬೆಂಬಲಿಸುತ್ತೇವೆ ಎಂದು ಹೇಳಿದರು.
ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಶ್ಲಾಘನೆ ವ್ಯಕ್ತವಾಗುತ್ತಿದ್ದು, ಬೆಂಗಳೂರಿನಲ್ಲಿ ಸಂಭ್ರಮ ಮನೆ ಮಾಡಿದೆ. ಜಯನಗರದ 4ನೇ ಬ್ಲಾಕ್ನಲ್ಲಿನ ಗಣೇಶ್ ದೇವಸ್ಥಾನದಲ್ಲಿ ತೆಂಗಿನ ಕಾಯಿ ಒಡೆದು, ವಿಶೇಷ ಪೂಜೆ ಸಲ್ಲಿಸಿ ಸೇನೆಗೆ ಇನ್ನಷ್ಟು ಶಕ್ತಿ ಬರಲಿ ಎಂದು ಪ್ರಾರ್ಥಿಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜನರು “ಭಾರತೀಯ ಹೆಣ್ಣುಮಕ್ಕಳ ಸಿಂಧೂರ ಅಳಸಿದ ಕ್ರಿಮಿಗಳಿಗೆ ಆಪರೇಷನ್ ಸಿಂಧೂರ್ ಮೂಲಕ ಉತ್ತರ ಭಾರತೀಯ ಸೇನೆ ಉತ್ತರ ನೀಡಿದೆ. ಪಾಕಿಸ್ತಾನದ ಕ್ರಿಮಿಗಳು ನಾಶ ಆಗಬೇಕು” ಎಂದು ಹೇಳಿದರು.




