ಮಡಿಕೇರಿ ಏ.21– ಮಡಿಕೇರಿ ನಗರದಲ್ಲಿರುವ ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ಏಪ್ರಿಲ್, 25 ರಂದು ಜರುಗುವ “ವಾರ್ಷಿಕೋತ್ಸವ” ಪೂಜೆ ಕಾರ್ಯಕ್ರಮವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮ ಶ್ರೀ ಉಚ್ಚಿಲ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಏಪ್ರಿಲ್, 25 ರಂದು ಬೆಳಗ್ಗೆ 9 ಗಂಟೆಯಿಂದ ಅಪರಾಹ್ನ 12 ಗಂಟೆವರೆಗೆ ಗಣಪತಿ ಹೋಮ ಮತ್ತು ಕಲಶಾಭಿಷೇಕ ಪೂಜೆಗಳು ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಮಹಾಪೂಜೆ ನಂತರ ಪ್ರಸಾದ ವಿತರಣೆ ನಡೆಯಲಿದೆ.
ಭಕ್ತಾದಿಗಳು ದೇವಾಲಯದಲ್ಲಿ ನಡೆಯಲಿರುವ ಪೂಜೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಭಾಜನರಾಗುವಂತೆ ದೇವಾಲಯದ ವ್ಯವಸ್ಥಾಪನ ಸಮಿತಿಯಿಂದ ಕೋರಿದೆ. ಪ್ರಸಾದ ಸೇವೆಯನ್ನು ಮಾಡಲಿಚ್ಚಿಸುವ ಸೇವಾಕರ್ತರು ದೇವಾಲಯದ ವ್ಯವಸ್ಥಾಪನಾ ಸಮಿತಿಯವರ ದೂರವಾಣಿ ಸಂಖ್ಯೆ 9448899567/ 9448798558 ನ್ನು ಸಂಪರ್ಕಿಸಬಹುದು ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ಅವರು ತಿಳಿಸಿದ್ದಾರೆ.