ಮಡಿಕೇರಿಏ.28: ಪ್ರಾದೇಶಿಕ ಸಾರಿಗೆ ಕಚೇರಿ ಸಭಾಂಗಣದಲ್ಲಿ ಏಪ್ರಿಲ್, 29 ರಂದು ಮಧ್ಯಾಹ್ನ 3 ಗಂಟೆಗೆ ಸಾರಿಗೆ ಅದಾಲತ್ ನಡೆಯಲಿದೆ. ಸಾರ್ವಜನಿಕರು ಸಾರಿಗೆ ಇಲಾಖೆಯ ಕೆಲಸ ಕಾರ್ಯಗಳಿಗೆ ಸಂಬಂಧಿಸಿದಂತೆ ತಮ್ಮ ಕುಂದುಕೊರತೆಯ ಅಹವಾಲನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ನಾಗರಾಜಚಾರ್ ಅವರು ಕೋರಿದ್ದಾರೆ.