
ಮಡಿಕೇರಿ, ಏ.23: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2024ರ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶ ಪ್ರಕಟವಾಗಿದ್ದು, ನಿಖಿಲ್ ಎಂ.ಆರ್. (724) ಐಎಎಸ್ ಗೆ ಆಯ್ಕೆ ಆಗಿದ್ದಾರೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) 2024ರ ನಾಗರಿಕ ಸೇವಾ ಪರೀಕ್ಷೆಯ ಅಂತಿಮ ಫಲಿತಾಂಶದಲ್ಲಿ ಒಟ್ಟು 1009 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು ಸಂದರ್ಶನ ಮತ್ತು ಮುಖ್ಯ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಫಲಿತಾಂಶ ನಿರ್ಧರಿಸಲಾಗಿದೆ.
ನಿಖಿಲ್ ಎಂ.ಆರ್. ಅವರು ಮಡಿಕೇರಿ ನಗರಸಭೆಯಲ್ಲಿ ಸಮುದಾಯ ಸಂಘಟನಾಧಿಕಾರಿಯಾಗಿ ನಿವೃತ್ತ ರಾಗಿರುವ ರಮೇಶ್ ಎಂ.ಎಲ್. ಅವರ ಪುತ್ರರಾಗಿದ್ದಾರೆ.