Site icon nadubadenews.com

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ

ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ನೇಮಕ

ವಿರಾಜಪೇಟೆ, ಫೆ.20:  ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ಕೊಡಗು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕರಿನೆರವಂಡ ಡ್ಯಾನಿ ಕುಶಾಲಪ್ಪ ಅವರನ್ನು ನೇಮಕಮಾಡಿ,  ಜಿಲ್ಲಾಧ್ಯಕ್ಷರಾದ ಚಾಮೆರ ದಿನೇಶ್‌ ಬೆಳ್ಯಪ್ಪ ಅವರು ಆದೇಶ ಮಾಡಿದ್ದಾರೆ.

ಮಕ್ಕಳೊಳಗಿನ ಸೃಜನಶೀಲತೆಯನ್ನು  ಹೊರರತೆಗೆದು, ನವ ಸಮಾಜದ ನಿರ್ಮಾಣದಲ್ಲಿ ಸಾಹಿತ್ಯದ ಬೆಳವಣಿಗೆಯ ಮಹತ್ವಾಕಾಂಕ್ಷೆಯುಳ್ಳ ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌, ರಾಜ್ಯ ಮತ್ತು ಅಂತರಾಜ್ಯ ಮಟ್ಟದಲ್ಲಿ ಘಟಕಗಳನ್ನು ಹೊಂದಿದ್ದು, ಮುಂದಿನ ದಿನಗಳಲ್ಲಿ ಸಂಘಟನೆಯನ್ನು ಜಿಲ್ಲೆಯಲ್ಲಿ ಬಲಿಷ್ಟವಾಗಿ ಕಟ್ಟಿಬೆಳೆಸುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಸಮರ್ಥರನ್ನೊಳಗೊಂಡ ತಂಡವನ್ನು ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Exit mobile version