Site icon nadubadenews.com

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿದ ಯೋಜನೆಗಳಿಗೆ ಅರ್ಜಿಗಳ ಆಹ್ವಾನ…

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿದ ಯೋಜನೆಗಳಿಗೆ ಅರ್ಜಿಗಳ ಆಹ್ವಾನ…
Spread the love
ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿದ ಯೋಜನೆಗಳಿಗೆ ಅರ್ಜಿಗಳ ಆಹ್ವಾನ…

ಮಡಿಕೇರಿ ಜೂ.13(Nadubade News): ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಹಾಯಧನ/ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬೇಕಿದೆ. 

ಅರ್ಜಿ ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ(ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆ ದಿನಾಂಕ ಇರುವುದಿಲ್ಲ). ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ವಿಶ್ವಕರ್ಮ ಸಮುದಾಯ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು.  ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು. ಕುಟುಂಬದ ಒಬ್ಬರಿಗೆ ಮಾತ್ರ ಸೌಲಭ್ಯ ಒದಗಿಸಲಾಗುವುದು.

ಅರಿವು ಯೋಜನೆಯಡಿ ವಯೋಮಿತಿ 18 ವರ್ಷಗಳಿಂದ 30 ವರ್ಷಗಳ ಮಿತಿಯಲ್ಲಿರಬೇಕು ವಾರ್ಷಿಕ ವರಮಾನ ರೂ.3.50 ಲಕ್ಷಗಳು. ಸ್ವಾವಲಂಬಿ ಸಾರಥಿ ಯೋಜನೆಯಡಿ ಅರ್ಜಿದಾರರು 21 ವರ್ಷ ಮೇಲ್ಪಟ್ಟು 45 ವರ್ಷದ  ಮಿತಿಯಲ್ಲಿರಬೇಕು. ಅರ್ಜಿದಾರರು ತಮ್ಮ ಮೊಬೈಲ್ ಸಂಖ್ಯೆಯನ್ನು ಹಾಗೂ ಬ್ಯಾಂಕ್ ಖಾತೆಯನ್ನು ತಮ್ಮ ಆಧಾರ್ ಸಂಖ್ಯೆಗೆ ಜೋಡಣೆ ಮಾಡಿರಬೇಕು. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ರೂ. 98 ಸಾವಿರ ಮತ್ತು ನಗರ  ಪ್ರದೇಶದವರಿಗೆ ರೂ. 1.20 ಲಕ್ಷಗಳ ಮಿತಿಯೊಳಗಿರಬೇಕು. ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಿಗಳಿಗೆ ಶೇ.1 ಮೀಸಲಾತಿ ಇದೆ.

ರಾಜ್ಯ ಸರ್ಕಾರದ/ ನಿಗಮದ ಯೋಜನೆಗಳ ವಿವರ: ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು. ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸದು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ನವೀಕರಣ). ಗಂಗಾ ಕಲ್ಯಾಣ ಯೋಜನೆ. ಈ ಯೋಜನೆಯಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‍ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ. ವಿದೇಶಿ ವ್ಯಾಸಂಗ ಯೋಜನೆ-ಈ ಯೋಜನೆಯಡಿ ವಾರ್ಷಿಕ ವರಮಾನವು ರೂ.15 ಲಕ್ಷಗಳ ಮಿತಿಯಲ್ಲಿರಬೇಕು. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆ-ಈ ಯೋಜನೆಯಡಿ ಅರ್ಜಿಯನ್ನು www.kaushalkar.com  ನಲ್ಲಿ ಸಲ್ಲಿಸಬೇಕು.

 ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಕಡ್ಡಾಯವಾಗಿ ಆಧಾರ್ ಕಾರ್ಡ್‍ನಲ್ಲಿರುವಂತೆ  ಅರ್ಜಿದಾರರ ಹೆಸರು/ವಿಳಾಸ/ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳಲ್ಲಿ  ತಾಳೆಯಾಗಬೇಕು ಬೆಂಗಳೂರು-ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್‍ನಡಿ ಅರ್ಜಿ ಸಲ್ಲಿಸಲು ತಿಳಿಸಿದೆ.

 ಹೆಚ್ಚಿನ ಮಾಹಿತಿಗೆ ನಿಗಮದ ವೆಬ್‍ಸೈಟ್ https://kvcdcl.karnataka.gov.inರಲ್ಲಿ ಅಥವಾ ನಿಗಮದ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 080-22374848/ 7899899039 ಯಿಂದ ಪಡೆಯಬಹುದಾಗಿದೆ. ಹಾಗೂ ಹೆಚ್ಚಿನ ವಿವರಗಳಿಗೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ(ನಿ), ಕೊಡಗು ಜಿಲ್ಲೆ ಮಡಿಕೇರಿ ಇವರನ್ನು ದೂ.ಸಂ.08272-221656 ಮುಖಾಂತರ ಸಂಪರ್ಕಿಸಬಹುದು.

“2023-24 ಹಾಗೂ 2024-25 ನೇ ಸಾಲಿನಲ್ಲಿ ಯೋಜನೆಗೆ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಮತ್ತೊಮ್ಮೆ ಬೇರೆ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ”. ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿಗಳನ್ನು ಸಲ್ಲಿಸಲು ಜುಲೈ, 02 ಕೊನೆಯ ದಿನವಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Exit mobile version