ಮಡಿಕೇರಿ, ಏ.14; ಮಡಿಕೇರಿಯಲ್ಲಿ ಕೊಡಗು ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ನಡೆದ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ಕಾರ್ಯಗಾರವನ್ನು ಕೊಡಗು- ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು.
ಈ ಸಂದರ್ಭ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ ಕೂಡ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಂಸದರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸ್ವಾವಲಂಬಿಗಳಾದರೆ ಮಾತ್ರ ಮಾನ್ಯ ಪ್ರಧಾನ ಮಂತ್ರಿಗಳ ವಿಕಸಿತ ಭಾರತದ ಕನಸು ಈಡೇರಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.