
ಬೆಂಗಳೂರ್,ಜು.30; (nadubadenews): ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಇಂದು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರುಗಳೊಂದಿಗೆ ವಿಧಾನಸೌಧ ತಮ್ಮ ಕಚೇರಿಯಲ್ಲಿ ವಿಶೇಷ ಸಭೆ ನಡೆಸಿದರು. ಕೊಡಗು ಜಿಲ್ಲೆಯ ಅಭಿವೃದ್ಧಿ, ಅನುದಾನ ಹಾಗೂ ಸಮಸ್ಯೆಗಳ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಾದ ಭೋಸರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಹಾಗೂ ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು.
ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ ಗ್ಯಾರಂಟಿ ಯೋಜನೆಗಳ ಧನಾತ್ಮಕ ಅನುಷ್ಟಾನ, ಹಾಗೂ ವಿವಿಧ ಇಲಾಖೆಗಳ ಅಡಿ ನೀಡಲಾದ ಅನುದಾನ ಹಾಗೂ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿಗಳು, ಸರ್ಕಾರದ ಎಲ್ಲಾ ಕಾರ್ಯಕ್ರಮಗಳು ಅರ್ಹರನ್ನು ತಲುಪುವಂತಾಗಬೇಕು, ಕೊಡಗಿನ ಅಭಿವೃದ್ದಿಗೆ ಸರ್ಕಾರ ಕಟಿಬದ್ದವಾಗಿದ್ದು, ಅನುದಾನದ ಕೊರತೆ ಇಲ್ಲ ಆದರೆ ಸದ್ಬಳಕೆಯಾಗುವಂತೆ ಗಮನ ಹರಿಸಬೇಕೆಂದು ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಶ್ರೀ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಮುಖ್ಯ ಮಂತ್ರಿಗಳ ಕಾರ್ದರ್ಶಿ ಬೊಳಂದಂಡ ಕಾವೇರಿ ಹಾಗೂ ಇತರೆ ಪ್ರಮುಖರು ಹಾಜರಿದ್ದರು.