https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

   ಜಿಲ್ಲೆಯಲ್ಲಿ ಭಾರೀ ವಾಹನ  ಸಂಚಾರ ನಿರ್ಬಂಧ…

News, Informatin , Enteetinement and Advertisement
27/05/202527/05/2025nadubadenews@gmail.comLeave a Comment on    ಜಿಲ್ಲೆಯಲ್ಲಿ ಭಾರೀ ವಾಹನ  ಸಂಚಾರ ನಿರ್ಬಂಧ…
Spread the love

       ಮಡಿಕೇರಿ ಮೇ.27(Nadubade News): ಕೊಡಗು ಜಿಲ್ಲೆಯಲ್ಲಿ ಕಳೆದ 4-5 ವರ್ಷಗಳ ಭಾರೀ ಮಳೆಯಿಂದ ಹಲವು ಭಾಗಗಳಲ್ಲಿ ಭೂಕುಸಿತವಾಗಿದ್ದು, ಜೀವಹಾನಿಯೊಂದಿಗೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಹಾನಿಯಾಗಿದೆ. ಕೊಡಗು ಜಿಲ್ಲೆಯ ರಸ್ತೆಗಳು ಭಾರೀ ತಿರುವುಗಳು ಹಾಗೂ ಏರಿಳಿತದಿಂದ ಕೂಡಿರುತ್ತದೆ. ಪ್ರಸ್ತುತ ಮುಂಗಾರು ಪ್ರಾರಂಭವಾಗಿದ್ದು, ಮಳೆಯ ಪ್ರಮಾಣ ಹೆಚ್ಚಿದಂತೆ ನೆಲದಲ್ಲಿ ತೇವಾಂಶ ಹೆಚ್ಚಾಗಿ, ಅಧಿಕ ಭಾರದ ವಾಹನಗಳು ಸಂಚರಿಸಿದಲ್ಲಿ ಭೂಕುಸಿತ ಉಂಟಾಗಿ ಅನಾಹುತಗಳಾಗುವ ಸಾಧ್ಯತೆ ಹೆಚ್ಚಿದೆ.

    ಆದ್ದರಿಂದ ಜಿಲ್ಲೆಯ ರಸ್ತೆಗಳು, ಸಾರ್ವಜನಿಕ ಆಸ್ತಿ-ಪಾಸ್ತಿಗಳ ರಕ್ಷಣೆ ಹಾಗೂ ಪ್ರಯಾಣಿಕರ ಮತ್ತು ಸಾರ್ವಜನಿಕ ಸುರಕ್ಷತೆಯ ಹಿತದೃಷ್ಟಿಯಿಂದ ಕರ್ನಾಟಕ ಪೊಲೀಸ್ ಕಾಯ್ದೆ 1963 ರ ವಿಧಿ 31, ಡಿಸಾಸ್ಟರ್ ಮ್ಯಾನೇಜ್‍ಮೆಂಟ್ ಆಕ್ಟ್ 2005ರ ಕಲಂ 33, ಮೋಟಾರು ವಾಹನಗಳ ಕಾಯ್ದೆ 1988 ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಗಳು 1989 ರ(ತಿದ್ದುಪಡಿ ನಿಯಮಾವಳಿ 1990) ನಿಯಮ 221-ಎ(5) ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರಡಿ ದತ್ತವಾದ ಅಧಿಕಾರದಂತೆ ಸ್ಥಳೀಯರ, ವಾಹನ ಸವಾರರ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಕೊಡಗು ಜಿಲ್ಲೆಯಾದ್ಯಂತ ಜೂನ್, 06 ರಿಂದ ಜುಲೈ, 05 ರವರೆಗೆ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸುವಂತೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

       ನಿರ್ಭಂಧಿತ ವಾಹನಗಳು:-ಎಲ್ಲಾ ರೀತಿಯ ಮರದ ದಿಮ್ಮಿ ಮತ್ತು ಮರಳು ಸಾಗಾಣಿಕೆ ವಾಹನಗಳು, ವಾಹನದ ನೋಂದಣಿ ತೂಕ 18,500 ಕೆ.ಜಿ.ಗಿಂತ ಹೆಚ್ಚಿನ ಸರಕು ಸಾಗಾಣೆ ಮಾಡುವ ಸರಕು ಸಾಗಾಣಿಕೆ ವಾಹನಗಳು, ಭಾರೀ ವಾಹನಗಳಾದ ಬುಲೆಟ್ ಟ್ಯಾಂಕರ್ಸ್, ಶಿಪ್ ಕಾರ್ಗೋ ಕಂಟೈನರ್ಸ್, ಲಾಂಗ್ ಚಾಸಿಸ್ (ಮಲ್ಟಿ ಆಕ್ಸಿಲ್) ವಾಹನಗಳು, ಆರ್ಟಿಕ್ಯೂಲೇಟೆಡ್ ವಾಹನಗಳು.

       ನಿರ್ಭಂದದಿಂದ ವಿನಾಯಿತಿ ನೀಡಿದ ವಾಹನಗಳು: ಅಡುಗೆ ಅನಿಲ ಮತ್ತು ಇಂಧನ ಪೂರೈಕೆ ವಾಹನಗಳು, ಹಾಲು ಪೂರೈಕೆ ವಾಹನಗಳು, ಸರ್ಕಾರಿ ಕೆಲಸದ ನಿಮಿತ್ತ ಉಪಯೋಗಿಸಲ್ಪಡುವ ವಾಹನಗಳು, ಶಾಲಾ ಕಾಲೇಜು ಮತ್ತು ಸಾರ್ವಜನಿಕ ಪ್ರಯಾಣಿಕರ ವಾಹನಗಳು(ಮಲ್ಟಿ ಆಕ್ಸಿಲ್ ಬಸ್‍ಗಳು ಸೇರಿದಂತೆ).

       ಈ ಬಗ್ಗೆ ಮೋಟಾರು ವಾಹನ ಕಾಯ್ದೆ 1988 ರ ಸೆಕ್ಷನ್ 116 ರಂತೆ ಅವಶ್ಯವಿರುವ ಸಂಜ್ಞೆ/ ಸೂಚನಾ ಫಲಕಗಳನ್ನು ಅಳವಡಿಸಲು ಜಿಲ್ಲಾ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮಡಿಕೇರಿ ಇವರಿಗೆ ಅನುಮತಿಸಿದೆ.

ಕೊಡಗು ಜಿಲ್ಲೆಯ ಮುಖಾಂತರ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 275 ರ ಜಿಲ್ಲೆಯ ಗಡಿಭಾಗಗಳಾದ ಕುಶಾಲನಗರ ಮತ್ತು ಸಂಪಾಜೆಯಲ್ಲಿ ವ್ಯವಸ್ಥಿತ ಚೆಕ್‍ಪೋಸ್ಟ್ ನಿರ್ಮಿಸಿ, ದಿನದ 24 ಗಂಟೆಯೂ ನಿಗಾ ವಹಿಸಲು ಸಿಬ್ಬಂದಿಗಳನ್ನು ನಿಯೋಜಿಸಲು, ಮೊಬೈಲ್ ಪ್ಯಾಟ್ರೋಲಿಂಗ್ ನಡೆಸಲು ಹಾಗೂ ಈ ಆದೇಶ ಉಲ್ಲಂಘನೆಯಾಗದಂತೆ ಮತ್ತು ಆದೇಶ ಉಲ್ಲಂಘಿಸಿದವರ ವಿರುದ್ದ ನಿಯಮಾನುಸಾರ ಕ್ರಮ ಕೈಗೊಳ್ಳಲು ಆರಕ್ಷಕರ ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶದಲ್ಲಿ ತಿಳಿಸಿದ್ದಾರೆ.

Post navigation

  ವಿಧಾನಸೌಧ  ಮಾರ್ಗದರ್ಶಿ ನಡಿಗೆ, ಐತಿಹಾಸಿಕ ಕಟ್ಟಡದ ಮಹತ್ವ ಸಾರುವ ಉದ್ದೇಶ…
ಕರ್ನಾಟಕ  ವಿದ್ಯುತ್ ಪ್ರಸರಣ ನಿಗಮದಿಂದ  ಸಾರ್ವಜನಿಕ ಪ್ರಕಟಣೆ…

Related Posts

ಕಡಗದಾಳುವಿನಲ್ಲಿ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ…

ಕಡಗದಾಳುವಿನಲ್ಲಿ ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರಚಿಕಿತ್ಸೆ…

19/05/202519/05/2025nadubadenews@gmail.com
ಕಾಫಿ ಸೊಸೈಟಿ ಚುನಾವಣೆ ಮುದ್ದಂಡ ದೇವಯ್ಯ ಬಣದ ದಿಗ್ವಿಜಯ

ಕಾಫಿ ಸೊಸೈಟಿ ಚುನಾವಣೆ ಮುದ್ದಂಡ ದೇವಯ್ಯ ಬಣದ ದಿಗ್ವಿಜಯ

11/04/202511/04/2025nadubadenews@gmail.com
ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

ಅರೆಭಾಷೆ ರಂಗ ತರಬೇತಿ ಶಿಬಿರಕ್ಕೆ ಸ್ಥಳೀಯ ಕಲಾವಿದರಿಂದ ಅರ್ಜಿ ಆಹ್ವಾನ…

14/05/202514/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version