Site icon nadubadenews.com

ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…
ಜಿಲ್ಲೆಯ ಸಮಸ್ಯೆಗಳನ್ನು ಪರಿಶೀಲಿಸಿ ಕೂಡಲೇ ಸರಿಪಡಿಸಲು ಸಂಸದ ಯದುವೀರ್ ಒಡೆಯರ್‌ ಸೂಚನೆ…

ಮಡಿಕೇರಿ,ಮೇ.08 (ನಡುಬಾಡೆ ನ್ಯೂಸ್):‌ ಮಡಿಕೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಸಂಸದ ಯದುವೀರ್ ಒಡೆಯರ್, ಮಡಿಕೇರಿ ಕಸ ವಿಲೇವಾರಿ ಘಟಕದ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು. ಜೆಜೆಎಮ್ ಪ್ರಗತಿ ಕುರಿತು ಅಧಿಕಾರಿಯಿಂದ ಮಾಹಿತಿ‌ ಪಡೆದು ಜೆಜೆಎಮ್ ಕುರಿತು ದೂರುಗಳು ಸಾರ್ವಜನಿಕರಿಂದ ಬಂದಿದೆ.ಸಾಕಷ್ಟು ಕಡೆ ಕಳಪೆ ಕಾಮಗಾರಿ ನಡೆದಿರುವುದು ಗಮನಕ್ಕೆ ಬಂದಿದೆ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಹೇಳಿದರು.ಬಿಎಸ್ಎನ್ಎಲ್ ಸಂಪರ್ಕ ಸಂಪೂರ್ಣ ಜಿಲ್ಲೆಯಲ್ಲಿ ಹದಗೆಟ್ಟಿದೆ. ಟವರ್ ಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

 ಸಮಿತಿ ಸಭೆಯಲ್ಲಿಎಂ.ಎಲ್.ಸಿ ಮಂಡೇಪಂಡ ಸುಜಾ ಕುಶಾಲಪ್ಪ, ಜಿಲ್ಲಾಧಿಕಾರಿ ವೆಂಕಟರಾಜ, ಜಿ.ಪಂ. ಸಿಇಓ ಆನಂದ್ ಪ್ರಕಾಶ್ ಮೀನ, ಪೊಲೀಸ್ ವರಿಷ್ಟಾಧಿಕಾರಿ ಕೆ ರಾಮರಾಜನ್ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

Exit mobile version