Site icon nadubadenews.com

ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ…

ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ…
Spread the love
ಡಿಪ್ಲೊಮಾ ಕೃಷಿ ಕೋರ್ಸ್‍ಗೆ ಅರ್ಜಿ ಆಹ್ವಾನ…

     ವಿರಾಜಪೇಟೆ, ಮೇ.10(ನಡುಬಾಡೆ ನ್ಯೂಸ್): ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್(4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು.

ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.‍ಎಸ್.‍ಎಲ್‍.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). 2025 ರ ಜೂನ್, 06 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ಸೈಟ್: www.uahs.edu.in  ನಲ್ಲಿ ದಿನಾಂಕ: 06-05-2025 ರಿಂದ 06-06-2025  ರವರೆಗೆ ಡೌನ್ ಲೋಡ್ ಮಾಡಬಹುದು. ಈ ರೀತಿ ವೆಬ್ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 06-06-2025 ರೊಳಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,  ಶಿವಮೊಗ್ಗ,  ಇರುವಕ್ಕಿ ಆವರಣ- 577 412 ಇಲ್ಲಿಗೆ ಕಳುಹಿಸಿಕೊಡಬೇಕು. ದಿನಾಂಕ: 06-06-2025 ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಶುಲ್ಕ:  ಸಾಮಾನ್ಯ ವರ್ಗದವರಿಗೆ ರೂ. 500, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250 ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‍ಗಳ ಡಿ.ಡಿ. ಯನ್ನು Comptroller, KSNUAHS, Shivamogga – 577  412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,  ಶಿವಮೊಗ್ಗ,  ಇರುವಕ್ಕಿ ಆವರಣ- 577412 ಇಲ್ಲಿಗೆ ಜೂನ್, 06  ರೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರವೇಶ ಮತ್ತು ಆಯ್ಕೆ ವಿಧಾನ:  ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್ಸೈಟ್ ‌ ಮುಖಾಂತರ ತಿಳಿಸಲಾಗುವುದು

     ವಿರಾಜಪೇಟೆ, ಮೇ.10(ನಡುಬಾಡೆ ನ್ಯೂಸ್): ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಬ್ರಹ್ಮಾವರದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್‍ಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

   ಡಿಪ್ಲೊಮಾ (ಕೃಷಿ) ಯನ್ನು ಕನ್ನಡ ಮಾಧ್ಯಮದಲ್ಲಿ ಸೆಮಿಸ್ಟರ್(4 ಸೆಮಿಸ್ಟರ್) ಪದ್ಧತಿಯಲ್ಲಿ ಬೋಧಿಸಲಾಗುವುದು. ಪ್ರವೇಶ ಅರ್ಹತೆ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಡಿಪ್ಲೊಮಾ (ಕೃಷಿ) ಕೋರ್ಸ್‍ಗೆ ಪ್ರವೇಶ ಕೋರುವ ಅಭ್ಯರ್ಥಿಗಳು ಎಸ್.‍ಎಸ್.‍ಎಲ್‍.ಸಿ. ಪರೀಕ್ಷೆಯಲ್ಲಿ ಕನ್ನಡ ಪಠ್ಯವನ್ನು ಭಾಷೆಯಾಗಿ ಅಭ್ಯಸಿಸಿ ಕನಿಷ್ಟ ಶೇ.45 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. (ಪ.ಜಾ./ಪ.ಪಂ./ಪ್ರವರ್ಗ-1ರವರುಗಳಿಗೆ ಕನಿಷ್ಠ ಶೇ. 40 ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು). 2025 ರ ಜೂನ್, 06 ರಂದು ಅಭ್ಯರ್ಥಿಗಳ ವಯಸ್ಸು 19 ವರ್ಷಗಳನ್ನು ಮೀರಿರಬಾರದು. ರೈತರ ಹಾಗೂ ಕೃಷಿ ಕಾರ್ಮಿಕರ ಮಕ್ಕಳಿಗೆ ಶೇ. 50 ರಷ್ಟು ಸೀಟುಗಳನ್ನು ಡಿಪ್ಲೊಮಾ (ಕೃಷಿ) ಪ್ರವೇಶಾತಿಗೆ ಮೀಸಲಿಡಲಾಗಿದೆ. ಅಧಿಸೂಚನೆ, ಅರ್ಜಿ ಹಾಗೂ ಮಾಹಿತಿ ಪುಸ್ತಕವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ವೆಬ್ಸೈಟ್: www.uahs.edu.in  ನಲ್ಲಿ ದಿನಾಂಕ: 06-05-2025 ರಿಂದ 06-06-2025  ರವರೆಗೆ ಡೌನ್ ಲೋಡ್ ಮಾಡಬಹುದು. ಈ ರೀತಿ ವೆಬ್ಸೈಟ್ ಮುಖಾಂತರ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಮತ್ತು ಅರ್ಜಿಯ ನಿಗದಿತ ಶುಲ್ಕವನ್ನು ಡಿ.ಡಿ. ರೂಪದಲ್ಲಿ ಲಗತ್ತಿಸಿ, ದಿನಾಂಕ: 06-06-2025 ರೊಳಗೆ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,  ಶಿವಮೊಗ್ಗ,  ಇರುವಕ್ಕಿ ಆವರಣ- 577 412 ಇಲ್ಲಿಗೆ ಕಳುಹಿಸಿಕೊಡಬೇಕು. ದಿನಾಂಕ: 06-06-2025 ರ ನಂತರ ಡಿ.ಡಿ. ಯನ್ನು ಪಡೆದು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಅರ್ಜಿ ಶುಲ್ಕ:  ಸಾಮಾನ್ಯ ವರ್ಗದವರಿಗೆ ರೂ. 500, ಪ.ಜಾ./ಪ.ಪಂ./ಪ್ರವರ್ಗ-1ರವರಿಗೆ ರೂ. 250 ಆಗಿದ್ದು, ರಾಷ್ಟ್ರೀಕೃತ ಬ್ಯಾಂಕ್‍ಗಳ ಡಿ.ಡಿ. ಯನ್ನು Comptroller, KSNUAHS, Shivamogga – 577  412 ಇವರ ಹೆಸರಿನಲ್ಲಿ ಪಡೆದು ಎಲ್ಲಾ ಅಗತ್ಯ ಅಡಕಗಳೊಂದಿಗೆ ಭರ್ತಿಮಾಡಿದ ಅರ್ಜಿಗಳನ್ನು ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ,  ಶಿವಮೊಗ್ಗ,  ಇರುವಕ್ಕಿ ಆವರಣ- 577412 ಇಲ್ಲಿಗೆ ಜೂನ್, 06  ರೊಳಗೆ ತಲುಪುವಂತೆ ಖುದ್ದಾಗಿ ಅಥವಾ ಅಂಚೆ ಮೂಲಕ ಕಳುಹಿಸಬಹುದು. ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪ್ರವೇಶ ಮತ್ತು ಆಯ್ಕೆ ವಿಧಾನ:  ಸರ್ಕಾರದ ಆದೇಶಗಳ ಅನ್ವಯ ಸೀಟುಗಳನ್ನು ಭರ್ತಿ ಮಾಡಲಾಗುವುದು. ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ರೋಸ್ಟರ್ ಪದ್ದತಿಯನ್ನು ಅಳವಡಿಸಿ, ಪ್ರವೇಶಕ್ಕೆ ಆಯ್ಕೆ ಮಾಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಪತ್ರ ಹಾಗೂ ವೆಬ್ಸೈಟ್ ‌ ಮುಖಾಂತರ ತಿಳಿಸಲಾಗುವುದು

Exit mobile version