
ಮಡಿಕೇರಿ ಜು.22(nadubadenews):-ಸರ್ಕಾರದ ಅಧೀನ ಕಾರ್ಯದರ್ಶಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಆದೇಶದಂತೆ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೌಶಲ್ಯಾಭಿವೃದ್ಧಿ ಸರ್ಕಾರ ಅಧೀನ ಕಾರ್ಯದರ್ಶಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇವರು ಬೀದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ಅಧಿನಿಯಮ 2014 ಮತ್ತು ಕರ್ನಾಟಕ ಬೀದಿ ವ್ಯಾಪಾರಿಗಳ (ಜೀವನೋಪಾಯ ಸಂರಕ್ಷಣೆ ಮತ್ತು ಬೀದಿ ವ್ಯಾಪಾರ ನಿಯಂತ್ರಣ) ನಿಯಮ 2019 ರಲ್ಲಿ ತಿಳಿಸಿರುವಂತೆ ‘ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿ’ ರಚನೆ ಮಾಡುವಂತೆ ಆದೇಶ ನೀಡಿರುತ್ತಾರೆ.
ಆದೇಶದಲ್ಲಿ ತಿಳಿಸಿರುವಂತೆ ವ್ಯಾಪ್ತಿಯೊಳಗಡೆ ತಾತ್ಕಾಲಿಕ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರ ಸ್ಥಾನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ನಗರದ ವ್ಯಾಪ್ತಿಯೊಳಗಡೆ ಕನಿಷ್ಠ 5 ವರ್ಷಗಳು ಬೀದಿ ಬದಿ ವ್ಯಾಪಾರದಲ್ಲಿ ತೊಡಗಿದ್ದು, ಈಗಾಗಲೇ ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜಕೀಯ ರಹಿತ ಬೀದಿ ಬದಿ ವ್ಯಾಪಾರಸ್ಥರ ಸಂಘ ಅಥವಾ ಒಕ್ಕೂಟದ ಸದಸ್ಯರುಗಳಿಂದ ಮೀಸಲಾತಿ ಪ್ರಕಾರ 4 ಸಾಮಾನ್ಯ, 3 ಪರಿಶಿಷ್ಟ ಜಾತಿ, 1 ಪರಿಶಿಷ್ಟ ಪಂಗಡ, 3 ಅಲ್ಪಸಂಖ್ಯಾತರು, 6 ಮಹಿಳೆ ಮತ್ತು 1 ವಿಕಲಚೇತರನರು. ಕೇಂದ್ರ ಸರ್ಕಾರ ಪುರಸ್ಕøತ ಡೇ ನಲ್ಮ್/ಡಿಜೆಎವೈ-ಎಸ್ ಯೋಜನೆಯ ಅಡಿಯಲ್ಲಿ ಸ್ಥಾಪಿತಗೊಂಡಿರುವ ಮಹಿಳಾ ಎಎಲ್‍ಎಫ್/ಎಸ್‍ಎಚ್‍ಜಿ. ಕನಿಷ್ಠ 5 ವರುಷಗಳಿಂದ ಸಮಾಜ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯ ಪ್ರತಿನಿಧಿ/ ಸಮಾಜ ಕಾರ್ಯಕರ್ತರು, ಸೇವಕರು ಬೀದಿ ಬದಿ ವ್ಯಾಪಾರಿಗಳೊಂದಿಗೆ ಕಾರ್ಯನಿರ್ವಹಿಸುವ ಸಂಸ್ಥೆಗೆ ಆದ್ಯತೆ. ಟ್ರೇಡ್ ಯೂನಿಯನ್ ಪ್ರತಿನಿಧಿಗಳು, ಹೋಟೆಲ್ ಮಾಲೀಕರ ಸಂಘದ ಪ್ರತಿನಿಧಿ ಹಾಗೂ ಮಾರುಕಟ್ಟೆ ಅಥವಾ ವ್ಯಾಪಾರಸ್ಥರ ಸಂಘಟನೆಯ ಪ್ರತಿನಿಧಿ. ಮಡಿಕೇರಿ ನಗರಸಭೆ ವ್ಯಾಪ್ತಿಯೊಳಗಡೆ ಆಸಕ್ತರು ಜುಲೈ, 23 ರ ಸಂಜೆ 5 ಗಂಟೆ ಒಳಗಡೆ ಸ್ವಯಂ ಲಿಖಿತ ಅರ್ಜಿಯನ್ನು ನಗರಸಭೆ ಕಚೇರಿಗೆ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರಾದ ಎಚ್.ಆರ್.ರಮೇಶ್ ಅವರು ಕೋರಿದ್ದಾರೆ.