Site icon nadubadenews.com

ದ್ವಿತೀಯ ಪಿಯುಸಿ ಪರೀಕ್ಷೆ-3 ವ್ಯವಸ್ಥಿತವಾಗಿ ನಡೆಸಲು ಸೂಚನೆ…

ದ್ವಿತೀಯ ಪಿಯುಸಿ ಪರೀಕ್ಷೆ-3 ವ್ಯವಸ್ಥಿತವಾಗಿ ನಡೆಸಲು ಸೂಚನೆ…
Spread the love
ದ್ವಿತೀಯ ಪಿಯುಸಿ ಪರೀಕ್ಷೆ-3 ವ್ಯವಸ್ಥಿತವಾಗಿ ನಡೆಸಲು ಸೂಚನೆ…

ಮಡಿಕೇರಿ ಜೂ.07(Nadubade News): ದ್ವಿತೀಯ ಪಿಯುಸಿ ಪರೀಕ್ಷೆ-3 ಸಂಬಂಧಿಸಿದಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-3 ನ್ನು ವ್ಯವಸ್ಥಿತವಾಗಿ ನಡೆಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಪರೀಕ್ಷೆ-2 ನಡೆಸಿದಂತೆ ಪರೀಕ್ಷೆ-3 ನ್ನು ಅಚ್ಚುಕಟ್ಟಾಗಿ ನಡೆಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.

   ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುಳ ಅವರು ಮಾತನಾಡಿ ದ್ವಿತೀಯ ಪಿಯುಸಿ ಪರೀಕ್ಷೆ-3 ಜೂನ್, 09 ರಿಂದ 20 ರವರೆಗೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆಯಲಿದೆ. ಪರೀಕ್ಷೆಯು ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಇಲ್ಲಿ ನಡೆಯಲಿದ್ದು, ಒಟ್ಟು 605 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ ಎಂದು ಮಾಹಿತಿ ನೀಡಿದರು.

   ಒಟ್ಟು ಕಾಲೇಜುಗಳ ಸಂಖ್ಯೆ 65, ಪರೀಕ್ಷೆಗೆ ಹಾಜರಾಗುವ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 605(ಎನ್‍ಸಿ, ಪ್ರೈವೇಟ್, ರಿಪೀಟರ್ಸ್ ಮತ್ತು ಇಂಪ್ರೂವೆಮೆಂಟ್), ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 03, ಮಡಿಕೇರಿ ತಾಲ್ಲೂಕಿನಲ್ಲಿ 1, ಸೋಮವಾರಪೇಟೆಯಲ್ಲಿ 1 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 01 ಇಲ್ಲಿ ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

   ವೆಬ್‍ಕಾಸ್ಟಿಂಗ್ ಸಹ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಖಜಾನೆ ಇಲಾಖೆ ಉಪ ನಿರ್ದೇಶಕರಾದ ಡಾ.ಬಿ.ಎನ್.ರಘುನಾಥ್, ತಹಶೀಲ್ದಾರರು, ಎಲ್ಲಾ ಮಾರ್ಗಾಧಿಕಾರಿಗಳು, 03 ಪರೀಕ್ಷಾ ಕೇಂದ್ರದ ಪರೀಕ್ಷಾ ಮುಖ್ಯ ಅಧೀಕ್ಷಕರು, ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು, ಪ್ರಾಂಶುಪಾಲರು ಇತರರು ಇದ್ದರು.

Exit mobile version