https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

News, Informatin , Enteetinement and Advertisement
10/06/202510/06/2025nadubadenews@gmail.comLeave a Comment on ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…
Spread the love
ನಗರ ಪುನರ್ವಸತಿ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ…

ಮಡಿಕೇರಿ ಜೂ.10(Nadubade News): ಗ್ರಾಮೀಣ ಪುನರ್ವಸತಿ ಯೋಜನೆಯಡಿ ನಗರಸಭೆ, ಪಟ್ಟಣ ಪಂಚಾಯ್ತಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರು(ಯುಆರ್ ಡಬ್ಲ್ಯು), ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು (ವಿಆರ್ ಡಬ್ಲ್ಯು ) ಹುದ್ದೆಗಳು ಖಾಲಿ ಇದ್ದು, ಬೌದ್ಧಿಕ ವಿಕಲತೆ (ಬುದ್ದಿಮಾಂದ್ಯತೆ) ಹಾಗೂ ಮಾನಸಿಕ ಅಸ್ವಸ್ಥತೆ ಇರುವ ವಿಕಲಚೇತನರನ್ನು ಹೊರತುಪಡಿಸಿ ಅರ್ಜಿ ಸಲ್ಲಿಸಬಯಸುವವರು ಜುಲೈ, 07 ರೊಳಗೆ ಅರ್ಜಿ ಸಲ್ಲಿಸಬಹುದು. 

ನಗರ ಪುನರ್ವಸತಿ ಕಾರ್ಯಕರ್ತರು, ಮಾಸಿಕ ಗೌರವಧನ ರೂ.9 ಸಾವಿರ, ಎಸ್‍ಎಸ್‍ಎಲ್‍ಸಿ ಉತ್ತೀರ್ಣ, ಅನುತ್ತೀರ್ಣ ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಮಾಸಿಕ ಗೌರವಧನ ರೂ.9 ಸಾವಿರ ಎಸ್‍ಎಸ್‍ಎಲ್‍ಸಿ ಉತ್ತೀರ್ಣ/ ಅನುತ್ತೀರ್ಣ, ಶೇ.40 ಕ್ಕಿಂತ ಮೇಲ್ಪಟ್ಟು ಶೇ.75 ಕ್ಕಿಂತ ಕಡಿಮೆ ಇರಬೇಕು. 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು.       ಹುದ್ದೆಗಳು ಖಾಲಿ ಇರುವ ವಿವರ ಯುಆರ್‍ಡಬ್ಲ್ಯು ನಗರಸಭೆ ಮಡಿಕೇರಿ-3 ಹುದ್ದೆ, ಸೋಮವಾರಪೇಟೆ ಪಟ್ಟಣ ಪಂಚಾಯಿತಿ, ವಿರಾಜಪೇಟೆ ಪುರಸಭೆ

      ವಿಆರ್‍ಡಬ್ಲ್ಯು: ಮಡಿಕೇರಿ ತಾಲ್ಲೂಕು ಬಲ್ಲಮಾವಟಿ, ಹಾಕತ್ತೂರು, ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ, ಆಲೂರು ಸಿದ್ದಾಪುರ, ವಿರಾಜಪೇಟೆ ತಾಲ್ಲೂಕಿನ ನಿಟ್ಟೂರು, ನಾಲ್ಕೇರಿ, ಪೊನ್ನಪ್ಪಸಂತೆ, ಕೆ.ಬಾಡಗ, ಕಿರುಗೂರು, ತಿತಿಮತಿ, ಮತ್ತು ಶ್ರೀಮಂಗಲ.

   ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು ಪಂಚಾಯತ್‍ಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಆರ್‍ಡಬ್ಲ್ಯುಗಳಿಂದ ಪಡೆದು ನಿಗದಿತ ದಿನಾಂಕದೊಳಗೆ ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿಗೆ ಅಥವಾ ಎಂಆರ್‍ಡಬ್ಲ್ಯುಗಳಿಗೆ ಸಲ್ಲಿಸಲು ತಿಳಿಸಿದೆ. 

ಹೆಚ್ಚಿನ ಮಾಹಿತಿಗೆ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನವರು ಹರೀಶ್ ಟಿ.ಆರ್ ಮೊ.ಸಂ.8861428931, ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನವರು ಪ್ರಥನ್ ಕುಮಾರ್ ಸಿ.ಬಿ ಮೊ.ಸಂ. 9900883654 ಹಾಗೂ ಮಡಿಕೇರಿ ತಾಲ್ಲೂಕಿನವರು ರಾಜೇಶ್ ಮೊ.ಸಂ.8073192914 ಸಂಖ್ಯೆಗಳನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ.08272-295829ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

Post navigation

ನಾಳೆ ಲೋಕಾಯುಕ್ತದಿಂದ ದೂರು ಅರ್ಜಿ ಸ್ವೀಕಾರ…
ವಿವಿಧದತ್ತಿ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಪತ್ರಕರ್ತರು

Related Posts

ವಿದ್ಯುತ್  ಸಹಾಯವಾಣಿ ಕೇಂದ್ರ ಆರಂಭ…

24/05/202524/05/2025nadubadenews@gmail.com

ಪೊನ್ನಂಪೇಟೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿವಿಧ ವೃತ್ತಿ ತರಬೇತಿಗೆ ಅರ್ಜಿಆಹ್ವಾನ…

07/05/202507/05/2025nadubadenews@gmail.com
 ದೇಶಕ್ಕೆಸೇವೆ, ಮತ್ತು ಬದ್ದತೆಗೆ  ಸಮರ್ಪಿತವಾದ  ಮೇಜರ್‌  ಜನರಲ್ ಚೆಪ್ಪುಡೀರಜಯ್ಅಪ್ಪಚ್ಚು

 ದೇಶಕ್ಕೆಸೇವೆ, ಮತ್ತು ಬದ್ದತೆಗೆ ಸಮರ್ಪಿತವಾದ  ಮೇಜರ್‌ ಜನರಲ್ ಚೆಪ್ಪುಡೀರಜಯ್ಅಪ್ಪಚ್ಚು

18/06/202518/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version