https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ನಾಗರಹೊಳೆ ಅತ್ತೂರು ಕೊಲ್ಲಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಎಲ್. ಎ. ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…  

ನಾಗರಹೊಳೆ ಅತ್ತೂರು ಕೊಲ್ಲಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಎಲ್. ಎ. ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…  

News, Informatin , Enteetinement and Advertisement
12/05/202512/05/2025nadubadenews@gmail.comLeave a Comment on ನಾಗರಹೊಳೆ ಅತ್ತೂರು ಕೊಲ್ಲಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಎಲ್. ಎ. ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…  
Spread the love
ನಾಗರಹೊಳೆ ಅತ್ತೂರು ಕೊಲ್ಲಿಯಲ್ಲಿ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಎಲ್. ಎ. ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…  

 ಪೊನ್ನಂಪೇಟೆ,ಮೇ,12(Nadubade News): ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಅತ್ತೂರು ಕೊಲ್ಲಿ ಹಾಡಿ ಇತ್ತೀಚೆಗೆ ಅರಣ್ಯ ನಿವಾಸಿಗಳು ಹಾಗೂ ಅರಣ್ಯ ಇಲಾಖೆಯ ನಡುವೆ ಸೃಷ್ಟಿಯಾಗಿರುವ ವಿವಾದದ ಸ್ಥಳಕ್ಕೆ ವಿರಾಜಪೇಟೆ ಕ್ಷೇತ್ರ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ  ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಆವರು ಭೇಟಿ ನೀಡಿ ಪರಿಶೀಲಿಸಿದರು.

      ಅರಣ್ಯ ವ್ಯಾಪ್ತಿ ನಿವಾಸಿಗಳು, ತಾವುಗಳು ಶತಮಾನಗಳಿಂದ ಇಲ್ಲಿ ವಾಸವಾಗಿದ್ದು ತಮಗೆ ಅರಣ್ಯ ರಕ್ಷಣೆ ಹಕ್ಕಿನಡಿ ಹಕ್ಕುಪತ್ರ ನೀಡಬೇಕೆಂದು ಬೇಡಿಕೆ ಇಟ್ಟರೆ, ಅರಣ್ಯಾಧಿಕಾರಿಗಳು ಸೂಕ್ತ ಕಾನೂನು ರೀತಿಯ ಪ್ರಕ್ರಿಯೆ ಆಗಬೇಕೆಂದು ವಾದ ಮಂಡಿಸಿದರು.   ಎರಡೂ ಕಡೆಯವರ ವಾದವನ್ನು ಆಲಿಸಿದ  ಶಾಸಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಮ್ಮ ಪ್ರಕ್ರಿಯೆ ಪೂರ್ಣಗೊಳಿಸುವುದರೊಂದಿಗೆ ಅರಣ್ಯ ನಿವಾಸಿಗಳಿಗೆ ತೊಂದರೆ ಮಾಡಬಾರದು ಹಾಗೂ ಅವರ ದಿನನಿತ್ಯದ ಕೆಲಸಗಳಿಗೆ ಯಾವುದೇ ರೀತಿಯ ಅಡತಡೆಗಳ ಆಗಬಾರದು ಎಂದು ಸೂಚಿಸಿದರು.

   ಅದೇ ರೀತಿ ಅರಣ್ಯ ನಿವಾಸಿಗಳು ತಮ್ಮ ಹಕ್ಕಿಗಾಗಿ ಹೋರಾಟ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಆದರೆ ಎಲ್ಲರೂ ಕಾನೂನಾತ್ಮಕವಾಗಿ ಮಾಡಬೇಕು ಮತ್ತು ಹೊರಗಿನವರು ಬಂದು ಇವರ ಹೋರಾಟದ ಹಾದಿ ತಪ್ಪಿಸುವ ಕೆಲಸ ಆಗಬಾರದು ಎಂದು ಸಲಹೆ ನೀಡಿದರು. ತಾವು ಮುಖ್ಯಮಂತ್ರಿಗಳೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಹೋರಾಟ ನಿರತರಿಗೆ  ಶಾಸಕರು ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಶಾಸಕರೊಂದಿಗೆ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ   ಮೇರಿಯಂಡ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೀದೇರಿರ ನವೀನ್, ಕೆ ಬಾಡಗ ವಲಯ ಅಧ್ಯಕ್ಷರಾದ ಚಿಮ್ಮಣಮಾಡ ರವಿ, ಕಾಂಗ್ರೆಸ್ ಮುಖಂಡರು, ಅರಣ್ಯ ಇಲಾಖೆಯ ಅಧಿಕಾರಿಗಳು,ಐ ಟಿ ಡಿ ಪಿ ಇಲಾಖೆಯ ಅಧಿಕಾರಿಗಳು, ಹಾಡಿ ಮುಖಂಡರು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Post navigation

ಶಾಸಕ ಪೊನ್ನಣ್ಣ ಪ್ರಾಯೋಜಿತ ಉಚಿತ ತರಬೇತಿಗೆ ಸಿವಿಲ್ ಸರ್ವಿಸ್ ಪರೀಕ್ಷಾರ್ಥಿಗಳ ಅರ್ಜಿ ಆಹ್ವಾನ…
ನಾಳೆ ಕೊಡಗಿನ ಹಲವೆಡೆ ವಿದ್ಯುತ್‌ ವ್ಯತ್ಯಯ…

Related Posts

ಮುದ್ದಂಡ ಹಾಕಿ ನಮ್ಮೆ  ನಾಳೆ  ಮಹಿಳಾ  ಕ್ವಾಟರ್ ಫೈನಲ್-ಸೆಮಿ ಫೈನಲ್

ಮುದ್ದಂಡ ಹಾಕಿ ನಮ್ಮೆ ನಾಳೆ ಮಹಿಳಾ ಕ್ವಾಟರ್ ಫೈನಲ್-ಸೆಮಿ ಫೈನಲ್

23/04/202523/04/2025nadubadenews@gmail.com

ಏ.29 ರಂದು ಸಾರಿಗೆ ಅದಾಲತ್…

28/04/202528/04/2025nadubadenews@gmail.com
ನಾಳೆ  ಪೊನ್ನಂಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

ನಾಳೆ  ಪೊನ್ನಂಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

23/04/202523/04/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version