ಮಡಿಕೇರಿ ಮೇ 13(Nadubade News): ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ಈ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಮಾರ್ಗಗಳಲ್ಲಿ ಮೇ, 14 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮಡಿಕೇರಿ ನಗರ, ರಾಜಸೀಟ್, ಗದ್ದಿಗೆ, ಕೋಟೆ, ಕುಂಡಾಮೇಸ್ತ್ರಿ, ಓಂಕಾರೇಶ್ವರ, ಜಿ.ಟಿ ರಸ್ತೆ, ಕೆಎಸ್‌ಆರ್‌ಟಿಸಿ, ಮೇಕೇರಿ, ಭಾಗಮಂಡಲ, ಬೋಯಿಕೇರಿ, ಸಂಪಾಜೆ, ಗಾಳಿಬೀಡು, ಮಕ್ಕಂದೂರು, ಹೆಬ್ಬೆಟ್ಟಗೇರಿ, ಕೆ.ಬಾಡಗ, ತಾಳಮ್ಮನೆ, ಬೆಟ್ಟಗೇರಿ, ಚೆಟ್ಟಿಮಾನಿ, ಚೇರಂಬಾಣೆ, ಮಕ್ಕಂದೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.
ಸೋಮವಾರಪೇಟೆ: ಸೋಮವಾರಪೇಟೆ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಐಗೂರು ಫೀಡರ್‌ನಲ್ಲಿ ಮೇ 14 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಿರುವುದ್ದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಬಜೆಗುಂಡಿ, ಕುಸುಬೂರು, ಕಾರೆಕೊಪ್ಪ, ಬೇಳೂರು, ಸಜ್ಜಳ್ಳಿ, ಐಗೂರು, ಯಡವಾರ, ಹೊಸತೋಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಪೊನ್ನಂಪೇಟೆ : ಪೊನ್ನಂಪೇಟೆ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್5 ಪಾಲಿಬೆಟ್ಟ ಫೀಡರ್‌ನಲ್ಲಿ ಮೇ, 14 ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಮಾರ್ಗದ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಪಾಲಿಬೆಟ್ಟ, ಚೆನ್ನಯ್ಯನಕೋಟೆ, ಚೆನ್ನಂಗಿ, ಹಂಚಿಕಾಡು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.