Site icon nadubadenews.com

ನಾಳೆ ಮಡಿಕೇರಿ ಮತ್ತು ಕೊಡ್ಲಿಪೇಟೆ ಸುತ್ತಮುತ್ತ ವಿದ್ಯುತ್ ವ್ಯತ್ಯಯ…

Spread the love

ಮಡಿಕೇರಿ, ಮೇ.05(ನಡುಬಾಡೆ ನ್ಯೂಸ್):- ಸೋಮವಾರಪೇಟೆ 66/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರದ ಕೊಡ್ಲಿಪೇಟೆ ಶಾಖಾ ವ್ಯಾಪ್ತಿಯಲ್ಲಿ ಫೀಡರ್ ನಿರ್ವಹಣೆ ಕಾಮಗಾರಿಗಳನ್ನು  ಕೈಗೊಂಡಿರುವುದರಿಂದ ಈ ಕೇಂದ್ರದಿಂದ ಹೊರಹೊಮ್ಮುವ ಎಫ್2 ಕೊಡ್ಲಿಪೇಟೆ ಫೀಡರ್ ಮಾರ್ಗದಲ್ಲಿ ಮೇ, 06 ರಂದು ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

     ಆದ್ದರಿಂದ ಅವರದಾಳು, ಕಣ್ಣಾರಳ್ಳಿ, ಕೊಡ್ಲಿಪೇಟೆ, ಬ್ಯಾಡಗೊಟ್ಟ, ನೀರುಗುಂದ, ಹೆಮ್ಮನೆ, ಬೆಸ್ಸೂರು, ಕಟ್ಟೆಪುರ, ನಿಲುವಾಗಿಲು, ಕೂಡ್ಲೂರು, ದೊಡ್ಡಬಂಡಾರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

     ಮಡಿಕೇರಿ 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್2 ಓಂಕಾರೇಶ್ವರ ಫೀಡರ್‍ನಲ್ಲಿ ಮೇ, 06  ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಳೆಗಾಲ ಮುಂಜಾಗೃತಾ ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಆದ್ದರಿಂದ ಕನ್ನಂಡಬಾಣೆ, ಗೌಡಸಮಾಜ, ಜೂನಿಯರ್ ಕಾಲೇಜು ರಸ್ತೆ, ದಾಸವಾಳ ರಸ್ತೆ, ಗಣಪತಿ ಬೀದಿ, ಓಂಕಾರೇಶ್ವರ ದೇವಸ್ಥಾನ, ಓಂಕಾರೇಶ್ವರ ರಸ್ತೆ, ಬ್ರಾಹ್ಮಿನ್ಸ್ ಬೀದಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

Exit mobile version