Site icon nadubadenews.com

ನಾಳೆ ಹಲವೆಡೆ ಕರೆಂಟ್‌ ಇರಲ್ಲ

ನಾಳೆ ಹಲವೆಡೆ ಕರೆಂಟ್‌ ಇರಲ್ಲ
ನಾಳೆ ಹಲವೆಡೆ ಕರೆಂಟ್‌ ಇರಲ್ಲ

ಮಡಿಕೇರಿ ಜೂ.23(nadubadenews):- ವಿರಾಜಪೇಟೆ 66/33 ಕೆ.ವಿ. ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಜೂನ್, 24 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 4.30 ಗಂಟೆಯವರೆಗೆ ಫೀಡರ್ ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿರಾಜಪೇಟೆ, ಸಿದ್ದಾಪುರ ಮತ್ತು ಅಮ್ಮತ್ತಿ ಶಾಖಾ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ವಿರಾಜಪೇಟೆ ಪಟ್ಟಣ, ಬಿಟ್ಟಂಗಾಲ, ಬಿ.ಶೆಟ್ಟಿಗೇರಿ, ಬೇಟೋಳಿ, ಆರ್ಜಿ, ಕೆದಮುಳ್ಳೂರು, ಕಾಕೋಟುಪರಂಬು, ಸಿದ್ದಾಪುರ, ಮಾಲ್ದಾರೆ, ಗುಹ್ಯ, ಕರಡಿಗೋಡು, ಅಮ್ಮತ್ತಿ, ಚೆಂಬೆಬೆಳ್ಳೂರು, ಕಣ್ಣಂಗಾಲ, ಹಾಲುಗುಂದ ಹಾಗೂ ಪಾರಾಣೆ, ನಾಪೋಕ್ಲು, ಮೂರ್ನಾಡು, ಹೊದ್ದೂರು, ಮರಗೋಡು ಫೀಡರ್‍ಗಳ ವ್ಯಾಪ್ತಿಯಲ್ಲಿ ಬರುವ ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.

    

Exit mobile version