https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಪೋಷಕರನ್ನು ಸಾಕದ ಮಕ್ಕಳ ಆಸ್ತಿ ನೋಂದಣಿ ರದ್ದು ಪಡಿಸಲು, ಸೂಚನೆ: ಕಾನೂನಿನಲ್ಲೂ ಅವಕಾಶವಿದೆ

ಪೋಷಕರನ್ನು ಸಾಕದ ಮಕ್ಕಳ ಆಸ್ತಿ ನೋಂದಣಿ ರದ್ದು ಪಡಿಸಲು, ಸೂಚನೆ: ಕಾನೂನಿನಲ್ಲೂ ಅವಕಾಶವಿದೆ

News, Informatin , Enteetinement and Advertisement
16/03/202516/03/2025nadubadenews@gmail.comLeave a Comment on ಪೋಷಕರನ್ನು ಸಾಕದ ಮಕ್ಕಳ ಆಸ್ತಿ ನೋಂದಣಿ ರದ್ದು ಪಡಿಸಲು, ಸೂಚನೆ: ಕಾನೂನಿನಲ್ಲೂ ಅವಕಾಶವಿದೆ
Spread the love
ಪೋಷಕರನ್ನು ಸಾಕದ ಮಕ್ಕಳ ಆಸ್ತಿ ನೋಂದಣಿ ರದ್ದು ಪಡಿಸಲು, ಸೂಚನೆ: ಕಾನೂನಿನಲ್ಲೂ ಅವಕಾಶವಿದೆ

ಬೆಂಗಳೂರು, ಮಾ.16: ವಯೋವೃದ್ದ ತಂದೆ-ತಾಯಿಯರನ್ನೇ ಅನಾಥರನ್ನಾಗಿ ಮಾಡುತ್ತಿರುವ ಪರಿಪಾಠ ಹೆಚ್ಚಾಗುತಿದ್ದು, ಕರ್ನಾಟಕದಲ್ಲಿ ಇತ್ತೀಚೆಗೆ ವೃದ್ಧ ಪೋಷಕರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಬಿಟ್ಟು ಹೋಗುತ್ತಿರುವ ಉದಾಹರಣೆಗಳು ಹೆಚ್ಚಾಗಿದೆ. ಈ ವಿಷಯವನ್ನು ಅರಿತ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್, ತೀವ್ರ ಬೇಸರ ವ್ಯಕ್ತಪಡಿಸಿದರಲ್ಲದೇ, ಕೂಡಲೇ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಕ್ರಮ ಕೈಗೊಳ್ಳಲು ಸಚಿವರು ಆದೇಶ ನೀಡಿದ್ದಾರೆ

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಬಿಟ್ಟು ಮಕ್ಕಳು ನಾಪತ್ತೆಯಾಗುತ್ತಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಒಂದರಲ್ಲೇ, 150 ಕ್ಕೂ ಹೆಚ್ಚು ಹಿರಿಯ ನಾಗರಿಕರನ್ನು ಮಕ್ಕಳು ತೊರೆದ ಪ್ರಕರಣಗಳು ವರದಿಯಾಗಿವೆ. ರಾಜ್ಯಾದ್ಯಂತ ಇತರ ವೈದ್ಯಕೀಯ ಸಂಸ್ಥೆಗಳಲ್ಲಿ ಇಂಥ 100 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಕಳೆದ ಒಂದು ವಾರದಿಂದ ವಿಕಾಸ ಸೌಧದಲ್ಲಿ ರಾಜ್ಯದ ವಿವಿಧ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಇತರ ಸದಸ್ಯರ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿರುವ ಸಚಿವರು, ಈ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿ ಇಂತ ಪ್ರಕರಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ಶಿಕ್ಷಣ ನಿರ್ದೇಶಕರು (ಡಿಎಂಇ) ಕೂಡಲೇ ಸಹಾಯಕ ಆಯುಕ್ತರಿಗೆ (ಕಂದಾಯ ಉಪವಿಭಾಗ) ದೂರುಗಳನ್ನು ಸಲ್ಲಿಸುವಂತೆ ಸೂಚನೆ ನೀಡಿದರು.

ತಮ್ಮ ಮಕ್ಕಳ ಪರವಾಗಿ ಮಾಡಿದ ವಿಲ್‌ಗಳು ಮತ್ತು ಆಸ್ತಿ ವರ್ಗಾವಣೆಗಳನ್ನು ರದ್ದುಗೊಳಿಸುವಂತೆ ಪರಿತ್ಯಕ್ತ ಪೋಷಕರಿಗೆ ಸಚಿವರು ಕರೆ ನೀಡಿದ್ದಾರೆ.

ತಮ್ಮ ಮಕ್ಕಳು ನಮ್ಮನ್ನು ನೋಡಿಕೊಳ್ಳಲು ಆಗದೇ, ತೊರೆದಿದ್ದಾರೆ. ಕೆಲವರು ಆರ್ಥಿಕ ಸಂಕಷ್ಟಗಳಿಂದ ನಮ್ಮನ್ನು ಇಲ್ಲಿ ಬಿಟ್ಟಿದ್ದಾರೆ. ನಮ್ಮ ಆಸ್ತಿಗಳನ್ನು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡ ನಂತರ ಮಕ್ಕಳು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಗೆ ಸೇರಿಸಿ ಹೊರಟುಹೋಗಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಊಟ, ವಸತಿ, ಉಚಿತವಾಗಿ ಸಿಗುತ್ತದೆ ಎಂಬ ಉದ್ದೇಶದಿಂದ ನಮ್ಮನ್ನು ಇಲ್ಲಿ ಬಿಟ್ಟುಹೋಗಿದ್ದಾರೆ ಎಂದು ಪರಿತ್ಯಕ್ತ ಪೋಷಕರು ತಿಳಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂಥ ಪರಿತ್ಯಕ್ತ ಹಿರಿಯ ನಾಗರಿಕರನ್ನು ಬಿಐಎಂಎಸ್ ಅಧಿಕಾರಿಗಳು ಬೆಳಗಾವಿ ಮತ್ತು ಸುತ್ತಮುತ್ತಲಿನ 70 ಹಿರಿಯ ನಾಗರಿಕರ ನಿವೃತ್ತಿ ಗೃಹಗಳಲ್ಲಿ ಅಥವಾ ವೃದ್ಧಾಶ್ರಮಗಳಲ್ಲಿ ಆಶ್ರಯ ಕಲ್ಪಿಸಿಕೊಟ್ಟಿದ್ದಾರೆ. ಆದರೆ ಇನ್ನೂ ಅನೇಕರು ಆಸ್ಪತ್ರೆಗಳಲ್ಲಿಯೇ ಇದ್ದಾರೆ.

ವೈದ್ಯಕೀಯ ಸಂಸ್ಥೆಗಳ ನಿರ್ದೇಶಕರು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ, 2007 ರ ಅಡಿಯಲ್ಲಿ ಸಹಾಯಕ ಆಯುಕ್ತರು ಕ್ರಮ ಕೈಗೊಳ್ಳುವುದನ್ನು ಖಚಿತಪಡಿಸಿಕೊಳ್ಳಲು ದೂರುಗಳನ್ನು ಸಲ್ಲಿಸಬೇಕು ಎಂದು ಡಾ. ಶರಣ ಪ್ರಕಾಶ್ ಪಾಟೀಲ್ ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

“ಈ ಕಾನೂನಿನ ಬಗ್ಗೆ ಅನೇಕ ಜನರಿಗೆ ತಿಳಿದಿಲ್ಲ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರಿಕರಿಗೆ ಆರ್ಥಿಕ ಮತ್ತು ವೈದ್ಯಕೀಯ ಬೆಂಬಲವನ್ನು ಒದಗಿಸಬೇಕು ಎಂಬ ನಿಯಮವಿದೆ. ಅವರು ಹಾಗೆ ಮಾಡಲು ವಿಫಲವಾದರೆ, ಪೋಷಕರು ತಮ್ಮ ಮಕ್ಕಳ ಪರವಾಗಿ ಮಾಡಿದ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸುವ ಕಾನೂನುಬದ್ಧ ಹಕ್ಕು ಹೊಂದಿರುತ್ತಾರೆ” ಎಂದು ಡಾ. ಪಾಟೀಲ್ ಹೇಳಿದರು. ಕಾಯ್ದೆಯ ಸೆಕ್ಷನ್ 23 ರ ಪ್ರಕಾರ, ಮಕ್ಕಳು ಆಸ್ತಿಯನ್ನು ಆನುವಂಶಿಕವಾಗಿ ಪಡೆದ ನಂತರ ಹೆತ್ತವರನ್ನು ನಿರ್ಲಕ್ಷಿಸಿದರೆ ಅಥವಾ ತ್ಯಜಿಸಿದರೆ, ವಿಲ್ ಅಥವಾ ಆಸ್ತಿ ವರ್ಗಾವಣೆಯನ್ನು ರದ್ದುಗೊಳಿಸಲು ಮತ್ತು ವಯಸ್ಸಾದ ಪೋಷಕರಿಗೆ ಮಾಲೀಕತ್ವವನ್ನು ಪುನಃ ಪಡೆಯಲು ಕಾಯ್ದೆಯಲ್ಲಿ ಅನುಮತಿ ಇದೆ ಎಂದು ತಿಳಿಸಲಾಗಿದೆ.

Post navigation

ಮಡಿಕೇರಿ-ಸಂಪಾಜೆವರೆಗೆ, ತಡೆಗೋಡೆ ನಿರ್ಮಾಣಕ್ಕೆ 94ಕೋಟಿ ಕೇಂದ್ರದಿಂದ ಅನುಮೋದನೆ
ಅಪ್ರಾಪ್ತರಿಗೆ ಚಾಲನೆಗೆ ವಾಹನ ನೀಡದಿರಿ: ಕೊಡಗು ಎಸ್ಪಿ ಸೂಚನೆ

Related Posts

 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

01/06/202501/06/2025nadubadenews@gmail.com
ಅಖಿಲ ಕೊಡವ ಸಮಾಜ ಬರೆದ ಪತ್ರದಲ್ಲಿ ಏನೇನಿದೆ…

ಅಖಿಲ ಕೊಡವ ಸಮಾಜ ಬರೆದ ಪತ್ರದಲ್ಲಿ ಏನೇನಿದೆ…

12/02/202512/02/2025nadubadenews@gmail.com
ಮಳೆ ತಂದ ಆವಾಂತರ  ಗಾಳಿಬೀಡು, ಗರ್ವಾಲೆ ಬೆಟ್ಟದಳ್ಳಿ, ಶಾಂತಳ್ಳಿ ವ್ಯಾಪ್ತಿಯ ಜನಜೀವನ ಅಸ್ತವ್ಯಸ್ತ…

ಮಳೆ ತಂದ ಆವಾಂತರ  ಗಾಳಿಬೀಡು, ಗರ್ವಾಲೆ ಬೆಟ್ಟದಳ್ಳಿ, ಶಾಂತಳ್ಳಿ ವ್ಯಾಪ್ತಿಯ ಜನಜೀವನ ಅಸ್ತವ್ಯಸ್ತ…

17/06/202517/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us