https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ನೋಂದಣಿ ಅಭಿಯಾನ…

News, Informatin , Enteetinement and Advertisement
06/05/202506/05/2025nadubadenews@gmail.comLeave a Comment on ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ನೋಂದಣಿ ಅಭಿಯಾನ…
Spread the love

ಮಡಿಕೇರಿ ಮೇ.06(ನಡುಬಾಡೆ ನ್ಯೂಸ್ ):- ‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರ ನೋಂದಣಿ ಅಭಿಯಾನ ನಡೆಯಲಿದೆ.

     ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನದ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.  ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5 ಸಾವಿರ, ಎರಡನೇ ಮಗು(ಹೆಣ್ಣು ಮಗುವಾಗಿರುವುದಕ್ಕೆ) ರೂ.6 ಸಾವಿರ ನೀಡಲಾಗುವುದು.

      ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತು ಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗ್ಗೆ ಮಡಿಕೇರಿ, ಸೋಮವಾರಪೇಟೆ, ಪೊನ್ನಂಪೇಟೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹಾಗೂ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ತೆರಳಿ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ/ ನರೇಗಾ ಕಾರ್ಡ್/ಇ-ಶ್ರಮ್ ಕಾರ್ಡ್/ ಆಯುಷ್ಮಾನ್ ಕಾರ್ಡ್ (ಯಾವುದಾದರೂ ಒಂದರ ನಕಲು ಪ್ರತಿ) ಈ ದಾಖಲಾತಿಗಳೊಂದಿಗೆ ಅಂಗನವಾಡಿ ಕಾರ್ಯಕರ್ತೆಯರ ಬಳಿ ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜ್ ಅವರು ತಿಳಿಸಿದ್ದಾರೆ.

Post navigation

ನಾಳೆ ಶನಿವಾರಸಂತೆ ವ್ಯಾಪ್ತಿಯಲ್ಲಿ ವಿದ್ಯುತ್‌ ವ್ಯತ್ಯಯ…
ಶ್ರೀಮತಿ ವಿಜಯ ವಿಷ್ಣುಭಟ್ ದತ್ತಿ ಪ್ರಶಸ್ತಿಗೆ, ಸ್ಮಿತಾ ಅಮೃತರಾಜ್ ಅವರ  ಹಾಯ್ ಮೆಟಾಯ್ ಕಥಾ ಸಂಕಲನ ಆಯ್ಕೆ…

Related Posts

ಕಾಲುಬಾಯಿ ರೋಗ ಲಸಿಕಾ ಅಭಿಯಾನ,  ಯಶಸ್ಸಿಗೆ ಜಿಲ್ಲಾಧಿಕಾರಿ ವೆಂಕಟರಾಜ್‌ ಸೂಚನೆ…

ಕಾಲುಬಾಯಿ ರೋಗ ಲಸಿಕಾ ಅಭಿಯಾನ,  ಯಶಸ್ಸಿಗೆ ಜಿಲ್ಲಾಧಿಕಾರಿ ವೆಂಕಟರಾಜ್‌ ಸೂಚನೆ…

17/04/202517/04/2025nadubadenews@gmail.com
ಅಮಿತ್‌ ಶಾರಿಂದ ಗೌರವ ಸ್ವೀಕರಿಸಿದ  CRPF ಕಮಾಂಡರ್ ಕೊಡಗಿನ ಆದರ್ಶ್  ಶಾಸ್ತ್ರಿ

ಅಮಿತ್‌ ಶಾರಿಂದ ಗೌರವ ಸ್ವೀಕರಿಸಿದ  CRPF ಕಮಾಂಡರ್ ಕೊಡಗಿನ ಆದರ್ಶ್  ಶಾಸ್ತ್ರಿ

19/04/202519/04/2025nadubadenews@gmail.com
     ಭಾರತೀಯ ನೇವಿ ಅಧಿಕಾರಿಯಾನ ಕಾಡ್ಯಮಾಡ ರಿಯಾ ಅಚ್ಚಯ್ಯ

     ಭಾರತೀಯ ನೇವಿ ಅಧಿಕಾರಿಯಾನ ಕಾಡ್ಯಮಾಡ ರಿಯಾ ಅಚ್ಚಯ್ಯ

01/06/202501/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version