
ಮಡಿಕೇರಿ, ಏ.28: ದಿನಾಂಕ 29.04.2025 ನೇ ಮಂಗಳವಾರದಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ, ಬೆಂಗಳೂರು, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು, ಮಡಿಕೇರಿ ಇವರ ಸಹಯೋಗದಲ್ಲಿ , ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಶ್ರೀ ಎಲ್.ಎನ್. ಮುಕುಂದರಾಜ್ ಅವರಿಂದ ಚಳವಳಿ ಮತ್ತು ಸಾಹಿತ್ಯ ಅಂತರ್‌ಸಂಬಂಧ ಎಂಬ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀ ಎಂ. ಪಿ. ಕೇಶವ ಕಾಮತ್ ರವರು ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಪ್ರಾಂಶುಪಾಲರಾದ, ಮೇಜರ್ ಡಾ. ರಾಘವ ಬಿ ವಹಿಸಲಿದ್ದು, ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾದ ಡಾ. ಚಿಕ್ಕಮಗಳೂರು ಗಣೇಶ, ಚಕೋರ-ಕೊಡಗು ಜಿಲ್ಲಾ ಸಂಚಾಲಕರಾದ ಡಾ. ಜೆ. ಸೋಮಣ್ಣ ಅವರುಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ಅಲ್ಲಾರಂಡ ರಂಗಚಾವಡಿ, ಕರವಲೆ ಬಾಡಗ, ಮಡಿಕೇರಿ ಇವರ ಸಹಕಾರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ಯುವ ಬರಹಗಾರರಾದ ಕೆ.ಜಿ. ರಮ್ಯಾ ಕಾರ್ಯಕ್ರಮ ನಿರ್ವಹಿಸಲಿದ್ದಾರೆ.