https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಬೂಕರ್ ವಿಜೇತ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ…

ಬೂಕರ್ ವಿಜೇತ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ…

News, Informatin , Enteetinement and Advertisement
02/06/202502/06/2025nadubadenews@gmail.comLeave a Comment on ಬೂಕರ್ ವಿಜೇತ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ…
Spread the love
ಬೂಕರ್ ವಿಜೇತ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ…

ಬೆಂಗಳೂರು, ಜೂ.02:  (nadubadenews): ಕನ್ನಡಕ್ಕೆ ಬೂಕರ್ ಪ್ರಶಸ್ತಿ ಗೆಲ್ಲುವ ಮೂಲಕ ಸಾಹಿತ್ಯ ಲೋಕಕ್ಕೆ ಹಿರಿಮೆ ತಂದ, ಬಾನು ಮುಷ್ತಾಕ್ ಮತ್ತು ದೀಪ ಬಾಸ್ತಿ ಅವರಿಗೆ ಸರ್ಕಾರದಿಂದ ತಲಾ 10ಲಕ್ಷ ಬಹುಮಾನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

  ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್ ನಲ್ಲಿ ಆಯೋಜಿಸಿದ್ದ ಬುಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರದ ಪರ   ಅಭಿನಂದಿಸಿ, ಸನ್ಮಾನಿಸಿ ಅವರು  ಮಾತನಾಡಿದರು.  ಬಾನು ಮುಷ್ತಾಕ್ ಅವರು ನಮ್ಮ ಭಾಷೆಗೆ ಬುಕರ್ ಒದಗಿಸಿಕೊಡುವ ಮೂಲಕ ಕನ್ನಡದ ಕೀರ್ತಿ ಹೆಚ್ಚಿಸಿದ್ದಾರೆ.  ಇದು ಇಡೀ ಕನ್ನಡ ಜಗತ್ತಿನ ಹೆಮ್ಮೆ ಎಂದು ಮೆಚ್ಚುಗೆ ಸೂಚಿಸಿದರು.

   ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ತಮ್ಮ ಕತೆಗಳ ಮೂಲಕ ಮತ್ತು ಅನುವಾದದ ಮೂಲಕ ಕನ್ನಡಕ್ಕೆ ಕೀರ್ತಿ ತಂದ ಬಾನು ಮುಷ್ತಾಕ್ , ದೀಪಾ ಬಾಸ್ತಿ ಅವರಿಗೆ ತಲಾ 10 ಲಕ್ಷ ಪುರಸ್ಕಾರ ನೀಡಲಾಗುವುದು ಎಂದು ಘೋಷಿಸಿದರು.

   ಬಾನು ಅವರ ಕತೆಗಳನ್ನು ಇಂಗ್ಲಿಷ್ ಗೆ ಪ್ರಕಟಿಸಲು, ಅನುವಾದಕ್ಕೆ ಸರ್ಕಾರದ ನೆರವು ನೀಡಲಾಗುವುದು ಎಂದು ತಿಳಿಸಿದರು. ಪತ್ರಕರ್ತೆಯಾಗಿ, ಲೇಖಕಿಯಾಗಿ, ವಕೀಲರಾಗಿ, ಹೋರಾಟಗಾರ್ತಿಯಾಗಿ ಸಮಾಜದಲ್ಲಿ ಗುರುತಿಸಿಕೊಂಡಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಯ ಶಕ್ತಿ ಎಂದು ವಿಶ್ಲೇಷಿಸಿದರು.

   ಲಂಕೇಶ್ ಪತ್ರಿಕೆಯಲ್ಲಿ ಪತ್ರಕರ್ತೆಯಾಗಿ ಬರೆಯುತ್ತಲೇ, ವಕೀಲೆಯಾಗಿ ಬಡವರ ಪರ ವಕಾಲತ್ತು ವಹಿಸುತ್ತಾ ರಾಜ್ಯೋತ್ಸವ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ಲಭಿಸಿರುವುದೇ ಬಾನು ಮುಷ್ತಾಕ್ ಅವರ ಬರವಣಿಗೆಗಳಲ್ಲಿ ಸಮಾಜಮುಖಿ ಸತ್ವ ಇದೆ ಎನ್ನುವುದಕ್ಕೆ ಸಾಕ್ಷಿ ಎಂದರು.

   ಮುಸ್ಲಿಂ ಸಮುದಾಯದ ಹೆಣ್ಣುಮಕ್ಕಳ ಧ್ವನಿಯಾಗಿ ಮೌಡ್ಯ ವಿರೋಧಿಸಿ ಬರೆಯುವ ಪ್ರಗತಿಪರ ಎದೆಗಾರಿಕೆ ಬಾನು ಅವರಲ್ಲಿದೆ. ಸಾಹಿತ್ಯದ ಮೂಲಕ ಮಾನವೀಯ ಸಂದೇಶ ನೀಡುವ ಜವಾಬ್ದಾರಿ ಬಾನು ಮುಷ್ತಾಕ್ ಅವರು ನಿರ್ವಹಿಸಿದ್ದಾರೆ.

ಕವಿರಾಜಮಾರ್ಗದಲ್ಲಿ ಪರಧರ್ಮ ಮತ್ತು ಪರ ವಿಚಾರಗಳನ್ನು ಸಹಾನುಭೂತಿಯಿಂದ ನೋಡುಬೇಕು ಎಂದು ಕರೆ ನೀಡಿದ್ದರೆ, ಆದಿಕವಿ ಪಂಪ ಅವರು ಮನುಷ್ಯ ಜಾತಿ ತಾನೊಂದೇ ವಲಂ ಎಂದಿದ್ದಾರೆ, ಬಸವಣ್ಣನವರು “ಇವ ನಮ್ಮವ” ಎಂದು ಹೇಳಿದ್ದಾರೆ. ಹೆಣ್ಣಿನ ಧ್ವನಿಯಾದ ಅಕ್ಕಮಹಾದೇವಿ ಅವರೂ ಇದನ್ನೇ ಧ್ವನಿಸಿದ್ದಾರೆ. ಇವರೆಲ್ಲರ ಆಶಯಗಳ ಮುಂದುವರಿಕೆಯಾಗಿ ಬಾನು ಮುಷ್ತಾಕ್ ಕೆಲಸ ಮಾಡಿದ್ದಾರೆ ಎಂದರು

Post navigation

ಕೊಡಗು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟ…
ವಿರಾಜಪೇಟೆ ಪೌರಕಾರ್ಮಿಕರಿಗೆ ಉಣಬಡಿಸಿದ ಶಾಸಕ, ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ …

Related Posts

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ಸೋ.ಪೇಟೆ ತಾಲೂಕು ಘಟಕಕ್ಕೆ ನೇಮಕ

ಕರ್ನಾಟಕ ಮಕ್ಕಳ ಸಾಹಿತ್ಯ ಪರಿಷತ್‌ ಸೋ.ಪೇಟೆ ತಾಲೂಕು ಘಟಕಕ್ಕೆ ನೇಮಕ

08/04/202508/04/2025nadubadenews@gmail.com
ಕಾಳಿ ಮಾಡ ಅರಸು ಗಣಪತಿ ಅಯಿಂಗಡ ಒಂದಾನೆ ಕಾಲತ ಕಣ್ಣೀರ್‌ರ ನೆಪ್ಪು…

ಕಾಳಿ ಮಾಡ ಅರಸು ಗಣಪತಿ ಅಯಿಂಗಡ ಒಂದಾನೆ ಕಾಲತ ಕಣ್ಣೀರ್‌ರ ನೆಪ್ಪು…

06/06/202506/06/2025nadubadenews@gmail.com

ವಿದ್ಯುತ್  ಸಹಾಯವಾಣಿ ಕೇಂದ್ರ ಆರಂಭ…

24/05/202524/05/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version