Site icon nadubadenews.com

ಭಾಗಮಂಡಲ ಪ್ರವಾಹ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಭೇಟಿ

ಭಾಗಮಂಡಲ ಪ್ರವಾಹ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಭೇಟಿ
ಭಾಗಮಂಡಲ ಪ್ರವಾಹ ಪ್ರದೇಶಕ್ಕೆ ಉಪವಿಭಾಗಾಧಿಕಾರಿ ಭೇಟಿ

ಭಾಗಮಂಡಲ, ಮೇ.29: (nadubadenews): ಮಾನ್ಯ ಉಪ ವಿಭಾಗಾಧಿಕಾರಿಗಳಾದ ವಿನಾಯಕ ನರವಾಡೆ ಅವರು ಭಾಗಮಂಡಲ ಹೋಬಳಿಯ ಪ್ರವಾಹ ಪೀಡಿತ ಬೆಂಗೂರು ಗ್ರಾಮದ ದೋಣಿಕಡು ಪ್ರದೇಶ ಹಾಗೂ ಭಾಗಮಂಡಲದ ತ್ರಿವೇಣಿ ಸಂಗಮವನ್ನು ಪರಿಶೀಲಿಸಿದರು. ಪದಕಲ್ಲು ಗ್ರಾಮದ ಹಾನಿಗೊಳಗಾಗಿರುವ ಭಾಸ್ಕರ್ ಎಂಬುವರ ಮನೆಯನ್ನು ಪರಿಶೀಲಿಸಿ, ಮಳೆಗಾಲದಲ್ಲಿ ಮುಂಜಾಗ್ರತ ಕ್ರಮವಾಗಿ ಕಾಳಜಿ ಕೇಂದ್ರಕ್ಕೆ ಕಾಯ್ದಿರಿಸಿದ ಚೇರಂಬಾಣೆ ಗ್ರಾಮದ ಬಾಲಕರ ಭವನ, ಭಾಗಮಂಡಲ ಗ್ರಾಮದ ಐಟಿಐ ಕಾಲೇಜು ಹಾಗೂ ಭಾಗಮಂಡಲ ಗ್ರಾಮದ ಕಾಶಿ ಮಠದಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿದರು. ಭಾಗಮಂಡಲ ಹೋಬಳಿ ಕಂದಾಯ ಪರಿಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮ ಸಹಾಯಕರು ಉಪಸ್ಥಿತರಿದ್ದರು.

Exit mobile version