Site icon nadubadenews.com

ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…

ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…
Spread the love
ಮಡಿಕೇರಿ ಭಾಗಮಂಡಲ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಎಲ್.ಎ.ಸಿ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ…

    ಭಾಗಮಂಡಲ, ಮೇ.11 (Nadubade News): ಕಳೆದ ವರ್ಷ ಸುರಿದ ಭಾರಿ ಮಳೆಯಿಂದಾಗಿ, ತೀರ್ಥಕ್ಷೇತ್ರ ತಲಕಾವೇರಿ-ಭಾಗಮಂಡಲ ಸಂಪರ್ಕಿಸುವ ಮಡಿಕೇರಿ ಭಾಗಮಂಡಲ ಮುಖ್ಯರಸ್ತೆಯ ಅಪ್ಪಂಗಳ-ಬೆಟ್ಟಗೇರಿ ಭಾಗದಲ್ಲಿ ರಸ್ತೆ ಹದಗೆಟ್ಟಿರುವುದನ್ನು ಮನಗಂಡ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು, ರಾಜ್ಯ ಸರ್ಕಾರದಿಂದ ವಿಶೇಷ ಅನುದಾನ ತಂದು, ಸುಮಾರು ₹ 4 ಕೋಟಿ ವೆಚ್ಚದಲ್ಲಿ ಅಪ್ಪಂಗಳ ಜಂಕ್ಷನ್ ನಿಂದ ಬೆಟ್ಟಗೇರಿ ತನಕದ ರಸ್ತೆಯ ಪುನರ್ ನಿರ್ಮಾಣ ಕಾರ್ಯಕ್ಕೆ ಇಂದು ಭೂಮಿ ಪೂಜೆ ನೆರವೇರಿಸಿದರು.    ದಿನವೊಂದಕ್ಕೆ ಸಾವಿರಾರು ಭಕ್ತಾದಿಗಳು ಹಾಗೂ ಸಾರ್ವಜನಿಕರು ಓಡಾಡುವ ಈ ರಸ್ತೆಯು, ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದ್ದು, ಈ ರಸ್ತೆ ಅಭಿವೃದ್ಧಿಯಾದ ಬಳಿಕ ಪ್ರಯಾಣಿಕರಿಗೆ ಅನುಕೂಲವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.   

ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ರಾಜ್ಯದಿಂದ ಹಾಗೂ ಹೊರ ರಾಜ್ಯದಿಂದ ಬರುವ ಸಾವಿರಾರು ಭಕ್ತರಿಗೆ ಈ ರಸ್ತೆಯು ಅನುಕೂಲವಾಗಲಿದ್ದು ಗುತ್ತಿಗೆದಾರರು ರಸ್ತೆ ನಿರ್ಮಾಣ ಮಾಡುವ ಸಂದರ್ಭ ವಾಹನ ಸವಾರರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ವೈಜ್ಞಾನಿಕವಾಗಿ ರಸ್ತೆಯನ್ನು ನಿರ್ಮಿಸಬೇಕೆಂದು ಸಲಹೆ ನೀಡಿದರು. ದಿನಂಪ್ರತಿ ಸಾವಿರಾರು ಜನರು ಓಡಾಡುವ ಈ ರಸ್ತೆಯ ಕಾಮಗಾರಿ ಅತಿ ಶೀಘ್ರದಲ್ಲಿ ಮುಕ್ತಾಯಗೊಳಿಸುವಂತೆ ಗುತ್ತಿಗೆದಾರರಿಗೆ ಹೇಳಿದರು.   

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಇಸ್ಮಾಯಿಲ್, ಪ್ರಮುಖರು ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

Exit mobile version