https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ; ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ವಿಶೇಷ ಮಧ್ಯಸ್ಥಿಕಾ ಅಭಿಯಾನ

ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ; ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ವಿಶೇಷ ಮಧ್ಯಸ್ಥಿಕಾ ಅಭಿಯಾನ

News, Informatin , Enteetinement and Advertisement
07/08/202507/08/2025nadubadenews@gmail.comLeave a Comment on ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ; ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ವಿಶೇಷ ಮಧ್ಯಸ್ಥಿಕಾ ಅಭಿಯಾನ
Spread the love
ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ; ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ವಿಶೇಷ ಮಧ್ಯಸ್ಥಿಕಾ ಅಭಿಯಾನ

ಮಡಿಕೇರಿ ಆ.07(nadubadenews):- ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಎಲ್ಲಾ ನ್ಯಾಯಾಲಯಗಳಲ್ಲಿರುವ ರಾಜಿಯಾಗುವಂತಹ ಬಾಕಿ ಪ್ರಕರಣಗಳನ್ನು ಮಧ್ಯಸ್ಥಿಕೆಗಾರಿಕೆಯ ಮೂಲಕ ಇತ್ಯರ್ಥಪಡಿಸಲು ಗೌ.ಮುಖ್ಯ ನ್ಯಾಯಮೂರ್ತಿಗಳು ಗೌ. ಸರ್ವೋಚ್ಛ ನ್ಯಾಯಾಲಯ ಅವರು ದೇಶಾದಾದ್ಯಂತ ಅಕ್ಟೋಬರ್, 07 ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ‘ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ’ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. 

ಅದರಂತೆ ಜಿಲ್ಲೆಯ ನ್ಯಾಯಾಲಯದಲ್ಲಿರುವ ರಾಜಿಯಾಗುವಂತಹ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸುತ್ತಿದ್ದು, ಕಕ್ಷಿದಾರರು ಈ 90 ದಿನಗಳ ವಿಶೇಷ ಅಭಿಯಾನದ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶುಭ ಅವರು ತಿಳಿಸಿದ್ದಾರೆ.

ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ 90 ದಿನಗಳ ಡ್ರೈವ್‍ನ್ನು ಹಮ್ಮಿಕೊಳ್ಳಲಾಗಿದ್ದು, ಈ ಅಭಿಯಾನದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧೀಕರಣ ಪ್ರಕರಣಗಳು, ಚೆಕ್ಕು ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ ಪ್ರಕರಣಗಳು, ರಾಜೀಯಾಗಬಲ್ಲ ಅಪರಾದಿಕü ಪ್ರಕರಣಗಳು, ಗ್ರಾಹಕ ವ್ಯಾಜ್ಯ ಪ್ರಕರಣಗಳು, ಡಿಆರ್‍ಟಿ ಪ್ರಕರಣಗಳು, ಪಾಲುಗಾರಿಕೆ ಪ್ರಕರಣಗಳು, ಭೂಸ್ವಾಧೀನ ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ವಿಶೇಷ ಅಭಿಯಾನ ಸಂದರ್ಭದಲ್ಲಿ ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಸುವರ್ಣ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ನ್ಯಾಯಾಲಯದಿಂದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಸೂಚಿಸಿಕೊಂಡಲ್ಲಿ ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ಜಿಲ್ಲಾ ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ನ್ಯಾಯಾಲಯದಲ್ಲಿರುವ ಮಧ್ಯಸ್ಥಿಕೆ ಕೇಂದ್ರದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಹಾಗೆಯೇ ಪ್ರಕರಣಗಳು ಉಚ್ಛ ನ್ಯಾಯಾಲಯದಲ್ಲಿ ಬಾಕಿ ಇದ್ದಲ್ಲಿ ಬೆಂಗಳೂರು, ದಾರವಾಡ, ಕಲ್ಬುರ್ಗಿ ಉಚ್ಛನ್ಯಾಯಾಲಯದಲ್ಲಿ ಮಧ್ಯಸ್ಥಿಕೆ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Post navigation

ಅಂದೋಳತ್‌ ಎಲಂಗಿ ನಡ್ಂದ ಏಳ್‌ನಾಡ್‌ ಕೊಡವ ಸಂಘ 39ನೇ ಒತ್ತೋರ್ಮೆ ಕೂಟ…
ಚೆಟ್ಟಳ್ಳಿಯಲ್ಲಿ ಗ್ರಾಮೀಣ ಸೊಗಡಿನ ಕಕ್ಕಡ-18 ಆಚರಣೆ

Related Posts

ನಡುಬಾಡೆ ನ್ಯೂಸ್‌- 28.8.25

28/08/202528/08/2025nadubadenews@gmail.com
ಮೇ1 ರಂದು ಮೂರ್ನಾಡಿನಲ್ಲಿ ಕೊಡಗು ಹೆಗ್ಗಡೆ ಸಮಾಜ ಕ್ರೀಡೋತ್ಸವಕ್ಕೆ ಚಾಲನೆ…

ಮೇ1 ರಂದು ಮೂರ್ನಾಡಿನಲ್ಲಿ ಕೊಡಗು ಹೆಗ್ಗಡೆ ಸಮಾಜ ಕ್ರೀಡೋತ್ಸವಕ್ಕೆ ಚಾಲನೆ…

25/04/202525/04/2025nadubadenews@gmail.com
  ನಾಳೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ಯೋಗದಿನಾಚರಣೆ  

  ನಾಳೆ ಪೊನ್ನಂಪೇಟೆಯ ರಾಮಕೃಷ್ಣ ಆಶ್ರಮದಲ್ಲಿ ಯೋಗದಿನಾಚರಣೆ  

20/06/202520/06/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version