ಮಡಿಕೇರಿ ಏ.11; ಕೊಡಗು ಜಿಲ್ಲಾ ಪೊಲೀಸ್ ಕಛೇರಿಯ ತಾಂತ್ರಿಕ ವಿಭಾಗದ ಹೆಡ್ ಕಾನ್ಸ್ ಟೇಬಲ್ ಸಿ.ಕೆ. ರಾಜೇಶ್ ಅವರಿಗೆ ಮುಖ್ಯಮಂತ್ರಿ ಪದಕ ಲಭಿಸಿದೆ. 2002 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಇಲಾಖೆಯಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದು, ಉತ್ತಮ ಸೇವೆಗಾಗಿ ರಾಜೇಶ್ 2016ರಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಪ್ರಶಸ್ತಿ ಪಡೆದಿರುತ್ತಾರೆ. ಜಿಲ್ಲೆ, ಹೊರ ಜಿಲ್ಲೆಯ ಹಾಗೂ ಹೊರ ರಾಜ್ಯದ ಹಲವಾರು ಕ್ಲಿಷ್ಟಕರವಾದ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು ಇವರ ಉತ್ತಮವಾದ ಮತ್ತು ದಕ್ಷತೆಯ ಕರ್ತವ್ಯ ನಿರ್ವಹಣೆಗಾಗಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರ ಪ್ರತಿಷ್ಟಿತ ಚಿನ್ನದ ಪದಕವನ್ನು ಪಡೆದಿದ್ದಾರೆ.