ಮಡಿಕೇರಿ ಏ.18 : ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಶಾರ್ಪ್ ಶೂಟರ್‌ಗಳಿಗೆ ರೋಮಾಂಚಕಾರಿ ಓಪನ್ ಶೂಟಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಏ.20 ರಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮೈದಾನದಲ್ಲಿ ಮೂರು ವಿಭಾಗಗಳಲ್ಲಿ ಬೊಡಿ ನಮ್ಮೆ ಸ್ಪರ್ಧೆ ನಡೆಯಲಿದೆ.
ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ.22 (50ಮೀ), 12″ ಬೋರ್ ತೆಂಗಿನಕಾಯಿ ಶೂಟಿಂಗ್ (30ಮೀ) ಹಾಗೂ ಏರ್ ರೈಫಲ್ ಎಗ್ ಶೂಟಿಂಗ್ (15ಮೀ) ವಿಭಾಗದಲ್ಲಿ ಮುಕ್ತಸ್ಪರ್ಧೆ ನಡೆಯಲಿದ್ದು, ವಿಜೇತರಿಗೆ ಆಕರ್ಷಕ ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ 9448796947, 9448895969 ಈ ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಮುದ್ದಂಡ ಕಪ್ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.