ಮಡಿಕೇರಿ ಮೇ.16(Nadubade News): 2025-26 ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿಗೆ ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಶೈಕ್ಷಣಿಕ ಸಂವಾದ ಮತ್ತು ಜಾಗೃತಿಯನ್ನು ಮೂಡಿಸಲು ತಾಲ್ಲೂಕು/ ವಲಯ ಹಂತದಲ್ಲಿ ಒಂದು ದಿನದ ಪ್ರೇರಣಾತ್ಮಕ ಶಾಲಾ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಮಡಿಕೇರಿ ತಾಲ್ಲೂಕಿನ ತಾಲ್ಲೂಕು ಮಟ್ಟದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮವು ಮೇ, 20 ರಂದು ಬೆಳಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ ಮಡಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಹಾಗೆಯೇ ಮೂರ್ನಾಡುವಿನ ಸರ್ಕಾರಿ ಪಿಎಂಶ್ರೀ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೋಬಳಿ ವಲಯದ ಕಾರ್ಯಕ್ರಮವು ಮೇ, 22 ರಂದು ಬೆಳಗ್ಗೆ 9 ಗಂಟೆಯಿಂದ 1 ಗಂಟೆಯವರೆಗೆ ನಡೆಯಲಿದೆ ಎಂದು ಮಡಿಕೇರಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಅವರು ತಿಳಿಸಿದ್ದಾರೆ.