https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ…

ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ…

News, Informatin , Enteetinement and Advertisement
12/03/202512/03/2025nadubadenews@gmail.comLeave a Comment on ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ…
Spread the love
ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ…

ಮಡಿಕೇರಿ, ಮಾ.12:- ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮುಖಾಂತರ ಸರ್ಕಾರದ ಮಹತ್ತರ ಖಾತರಿ ಯೋಜನೆಯಾದ ‘ಯುವನಿಧಿ’ ಯೋಜನೆಯನ್ನು 2023 ರ ಡಿಸೆಂಬರ್, 26 ರಂದು ಚಾಲನೆ ನೀಡಲಾಗಿದೆ.
2023-24 ರಲ್ಲಿ ಪದವಿ, ಡಿಪ್ಲೋಮಾ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಉತ್ತೀರ್ಣರಾಗಿ 6 ತಿಂಗಳಾದರೂ ಸರ್ಕಾರಿ, ಖಾಸಗಿ, ಸ್ವಯಂ ಉದ್ಯೋಗ ಹೊಂದಿಲ್ಲದವರು ಮತ್ತು ಉನ್ನತ ವಿದ್ಯಾಭ್ಯಾಸ ಮುಂದುವರೆಸದೆ ಇರುವ ವಿದ್ಯಾರ್ಥಿಗಳು ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ http://sevasindhugs.karnataka.gov.in ಪೋರ್ಟಲ್ ಮೂಲಕ ಉಚಿತವಾಗಿ ‘ಯುವನಿಧಿ’ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಪದವೀಧರರಿಗೆ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವೀಧರರಿಗೆ ಪ್ರತಿ ತಿಂಗಳು ರೂ.3 ಸಾವಿರ ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ.1500 ಗಳನ್ನು ನಿರುದ್ಯೋಗ ಭತ್ಯೆಯನ್ನಾಗಿ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳವರೆಗೆ ನೀಡಲಾಗುತ್ತದೆ.

ಈಗಾಗಲೇ ನೋಂದಾಯಿಸಿಕೊಂಡು ಹಣ ಪಡೆಯುತ್ತಿರುವ ಫಲಾನುಭವಿಗಳು, ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕಾಗುತ್ತದೆ. ಮಾರ್ಚ್, ಏಪ್ರಿಲ್, ಮೇ ಮಾಹೆಯ ಸ್ವಯಂ ಘೋಷಣೆಯನ್ನು ಮೇ ತಿಂಗಳಲ್ಲಿ 25 ನೇ ದಿನಾಂಕದೊಳಗೆ ಸ್ವಯಂ ಘೋಷಣೆಯನ್ನು ಮಾಡಿಕೊಳ್ಳಬೇಕು.


ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 18005999918 ಗೆ ಕರೆ ಮಾಡುವ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ(9449692691) ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.

Post navigation

ಸಕಲೇಶಪುರದ ಆನೆ ನೊಖ್ಯ ಗ್ರಾಮದಲ್ಲಿ ಹೇಗೇ…?!!! : ಗ್ರಾಮಸ್ಥರ ಕಳವಳ
ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ

Related Posts

ವಿವಿಧದತ್ತಿ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಪತ್ರಕರ್ತರು

ವಿವಿಧದತ್ತಿ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಪತ್ರಕರ್ತರು

10/06/202510/06/2025nadubadenews@gmail.com
ಪ್ರತಿಷ್ಟಿತ  ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಎಸ್.ಪಿ ಸೇರಿದಂತೆ ಮೂವರು ಅಧಿಕಾರಿಗಳು…

ಪ್ರತಿಷ್ಟಿತ  ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೊಡಗು ಎಸ್.ಪಿ ಸೇರಿದಂತೆ ಮೂವರು ಅಧಿಕಾರಿಗಳು…

20/05/202520/05/2025nadubadenews@gmail.com
ಅಖಿಲ ಕೊಡವ ಸಮಾಜ ಬರೆದ ಪತ್ರದಲ್ಲಿ ಏನೇನಿದೆ…

ಅಖಿಲ ಕೊಡವ ಸಮಾಜ ಬರೆದ ಪತ್ರದಲ್ಲಿ ಏನೇನಿದೆ…

12/02/202512/02/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us