ವಿರಾಜಪೇಟೆ, ಏ.15; ವಿರಾಜಪೇಟೆಯ ಶಾಸಕರ ಗೃಹ ಕಚೇರಿಯಲ್ಲಿ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರಾದ ಸಂಕೇತ್ ಪೂವಯ್ಯನವರ ಕಚೇರಿಯನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು ನೆರವೇರಿಸಿದರು.
ಕ್ಷೇತ್ರದಲ್ಲಿ, ಅದರಲ್ಲೂ ವಿಶೇಷವಾಗಿ ದಕ್ಷಿಣ ಕೊಡಗು ಭಾಗದಲ್ಲಿ ರೈತರನ್ನು ಹಾಗೂ ಸಾರ್ವಜನಿಕರನ್ನು ಅತಿಯಾಗಿ ಕಾಡುತ್ತಿರುವ ಪ್ರಾಣಿ-ಮಾನವ ಸಂಘರ್ಷಕ್ಕೆ ಇತಿಶ್ರೀ ಹಾಡುವ ನಿಟ್ಟಿನಲ್ಲಿ ಅವಿರತ ಶ್ರಮಿಸುತ್ತಿರುವ ಮಾನ್ಯ ಶಾಸಕರಿಗೆ, ಸಂಕೇತ್ ಪೂವಯ್ಯನವರ ಬೆಂಬಲ ದೊಡ್ಡಮಟ್ಟದಲ್ಲಿ ಇದೆ.
ಆ ನಿಟ್ಟಿನಲ್ಲಿ ಇಂದು ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರು, ಅರಣ್ಯ ಹಾಗೂ ಮಾನವ-ಪ್ರಾಣಿ ಸಂಘರ್ಷದಂತಹ ತೊಂದರೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈ ಕಚೇರಿಯ ಕಾರ್ಯ ವ್ಯಾಪ್ತಿಯು ಮಹತ್ವ ಪಡೆದುಕೊಂಡಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಮಾಜಿ ಎಂಎಲ್.ಸಿ ಶ್ರೀ ಅರುಣ್ ಮಾಚಯ್ಯ, ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರುಗಳು, ಪುರಸಭಾ ಅಧ್ಯಕ್ಷರು, ಉಪಾಧ್ಯಕ್ಷರು, ಪುರಸಭಾ ಸದಸ್ಯರು, ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರು, ಮುಂಚೂಣಿ ಘಟಕದ ಅಧ್ಯಕ್ಷರುಗಳು, ಪದಾಧಿಕಾರಿಗಳು, ವಲಯ ಅಧ್ಯಕ್ಷರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದು ಶುಭ ಕೋರಿದರು.