Site icon nadubadenews.com

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ
Spread the love
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣಕ್ಕೆ ದುಡಿದವರಿಗೆ  ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಡಿಕೇರಿ ಜು.25,(nadubadenews): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ವತಿಯಿಂದ 2025 ರ ಅಕ್ಟೋಬರ್, 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ  ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ/ ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಈ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಪ್ರಶಸ್ತಿಗಳನ್ನು ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು  ನೀಡಲಾಗುವುದು. ಆದ್ದರಿಂದ ವಿವಿಧ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿರಿಯ ನಾಗರಿಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ನೀಡುವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.  

ನಿಗದಿತ ಅರ್ಜಿ ನಮೂನೆಯನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಡಿಕೇರಿ ಇಲ್ಲಿಂದ ಪಡೆದು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲಾತಿಗಳೊಂದಿಗೆ ದ್ವಿಪ್ರತಿಯಲ್ಲಿ ದಿನಾಂಕ: 25-08-2025 ಸಂಜೆ 5.00 ಗಂಟೆಯ ಒಳಗಾಗಿ ಈ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂರವಾಣಿ ಸಂಖ್ಯೆ: 08272-295829 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವಿಮಲ ಅವರು ತಿಳಿಸಿದ್ದಾರೆ.

Exit mobile version