ಮಡಿಕೇರಿ ಮೇ.24(Nadubade News): ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿರುವ ಸಮಾಜ ಕಲ್ಯಾಣ ಇಲಾಖಾ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳಲ್ಲಿ 2025-26ನೇ ಸಾಲಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2025-26ನೇ ಸಾಲಿನಲ್ಲಿ ಸೋಮವಾರಪೇಟೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳು ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಯಾವುದೇ ಶುಲ್ಕವಿಲ್ಲದೇ ಸರ್ಕಾರದ ವತಿಯಿಂದ ಊಟ, ವಸತಿ, ಸಮವಸ್ತ್ರ, ಶೂ-ಸಾಕ್ಸ್, ಪಠ್ಯ ಪುಸ್ತಕ, ಲೇಖನ ಸಾಮಗ್ರಿಗಳು, ಶುಚಿ ಸಂಭ್ರಮ ಕಿಟ್(ಸೋಪು, ಎಣ್ಣೆ, ಬ್ರಶ್, ಪೇಸ್ಟ್, ಪೌಡರ್, ಕಂಪ್ಯೂಟರ್ ಲ್ಯಾಬ್, ಆಟೋಪಕರಣಗಳು ಹಾಗೂ ಇತರೆ ಸೌಲಭ್ಯಗಳು ಮತ್ತು ನುರಿತ ಬೋಧಕರಿಂದ ಬೋಧನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದ್ದು, ವಿದ್ಯಾರ್ಥಿಗಳ ಉಚಿತ ಪ್ರವೇಶಾತಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.
ಸಾರ್ವಜನಿಕರು ತಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಕುಶಾಲನಗರ 9483116504, ಸೋಮವಾರಪೇಟೆ 9741747661, ಹೆಬ್ಬಾಲೆ 7348840070, ಕೊಡ್ಲಿಪೇಟೆ 9844581437 ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕೀಯರ ವಿದ್ಯಾರ್ಥಿ ನಿಲಯ ಕುಶಾಲನಗರ 9740132356, ಸೋಮವಾರಪೇಟೆ 8861486871, ಶನಿವಾರಸಂತೆ 8861486871, ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕುಶಾಲನಗರ 9483116504 ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕೀಯರ ವಿದ್ಯಾರ್ಥಿ ನಿಲಯ ಕುಶಾಲನಗರ ದೂ.ಸಂ.9740132356 ಈ ಸಂಸ್ಥೆಗಳಲ್ಲಿ ದಾಖಲು ಮಾಡುವಂತೆ ಸೋಮವಾರಪೇಟೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಕೋರಿದ್ದಾರೆ.