https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ…

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ…

News, Informatin , Enteetinement and Advertisement
07/06/202507/06/2025nadubadenews@gmail.comLeave a Comment on ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ…
Spread the love
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ…

   ಮಡಿಕೇರಿ ಜೂ.07(Nadubade News): 2025-26 ನೇ ಸಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

   ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ(ಪ್ರವರ್ಗ-IIIಬಿ) ಅಭಿವೃದ್ದಿಗಾಗಿ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಶೈಕ್ಷಣಿಕ ಸಾಲ ಯೋಜನೆಗಳಾದ ಬಸವ ಬೆಳಗು ಯೋಜನೆ (ಹೊಸದು), ಬಸವ ಬೆಳಗು ಯೋಜನೆ (ನವೀಕರಣ), ವಿದೇಶ ವಿದ್ಯಾ ವಿಕಾಸ ಯೋಜನೆ (ಹೊಸದು), ಜೀವಜಲಯೋಜನೆ, ಕಾಯಕ ಕಿರಣ ಯೋಜನೆ, ಭೋಜನಾಲಯ ಕೇಂದ್ರ, ವಿಭೂತಿ ನಿರ್ಮಾಣ ಘಟಕ, ಸ್ವಾವಲಂಭಿ ಸಾರಥಿ ಯೋಜನೆ, ಸ್ವಾತಂತ್ರ್ಯ ಅಮೃತಮಹೋತ್ಸವದ ಮುನ್ನಡೆ ಯೋಜನೆ, ಸ್ವಸಹಾಯ ಸಂಘಗಳಿಗೆ ಉತ್ತೇಜನ ಯೋಜನೆಗಳಲ್ಲಿ ಸೌಲಭ್ಯ ಪಡೆಯ ಬಯಸುವ ಫಲಾಪೇಕ್ಷಿಗಳಿಂದ ಆನ್‍ಲೈನ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

   ಅರ್ಜಿ ಸಲ್ಲಿಸಲು ಜೂನ್, 30 ಕೊನೆಯ ದಿನವಾಗಿದೆ. ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿರಬೇಕು.

   ನಿಗಮವು ಅನುಷ್ಠಾನಗೊಳಿಸುವ ಯೋಜನೆಗಳಲ್ಲಿ ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ಅಧ್ಯಕ್ಷರು/ ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯ ಬಯಸುವವರೂ ಸಹ ಆನ್‍ಲೈನ್‍ನಲ್ಲಿ ಅರ್ಜಿಯನ್ನು ಸಲ್ಲಿಸುವುದು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರೂ ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ.

   ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ನಾಗರಿಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಫೋರ್ಟಲ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕಾಗಿರುತ್ತದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24 ಹಾಗೂ 2024-25 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರು ಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ.

   ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://kvldcl.karnataka.gov.in  ಅಥವಾ ನಿಗಮದ ದೂ.ಸಂ. 080 22865522, 9900012351, 9900012352 ನ್ನು ಸಂಪರ್ಕಿಸುವುದು  ಅಥವಾ  ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ  ಅರಸು  ಹಿಂದುಳಿದ ವರ್ಗಗಳ  ಅಭಿವೃದ್ದಿ  ನಿಗಮದ  ಜಿಲ್ಲಾ ಕಚೇರಿ ದೂ.ಸಂ.08272-221656 ಮೂಲಕ ಅಥವಾ ಖುದ್ದಾಗಿ ಸಂಪರ್ಕಿಸಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Post navigation

ದ್ವಿತೀಯ ಪಿಯುಸಿ ಪರೀಕ್ಷೆ-3 ವ್ಯವಸ್ಥಿತವಾಗಿ ನಡೆಸಲು ಸೂಚನೆ…
ಯೋಗ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ…

Related Posts

ನಾಳೆ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ…

ನಾಳೆ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ…

07/05/202507/05/2025nadubadenews@gmail.com
ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

25/03/202525/03/2025nadubadenews@gmail.com

ನಡುಬಾಡೆ ಇ-ನ್ಯೂಸ್‌ 31.8.25

31/08/202531/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version