Site icon nadubadenews.com

ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18 ನೇ ವರ್ಷದ ಪುನರ್ ಪ್ರತಿಷ್ಠಾಪನೆ

ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18 ನೇ ವರ್ಷದ ಪುನರ್ ಪ್ರತಿಷ್ಠಾಪನೆ
Spread the love
ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18 ನೇ ವರ್ಷದ ಪುನರ್ ಪ್ರತಿಷ್ಠಾಪನೆ

ಮಡಿಕೇರಿ ಏ.16:-ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯ ಸಮಿತಿ ವತಿಯಿಂದ ನಗರದ ನಾಲ್ಕು ಶಕ್ತಿ ದೇವತೆಗಳಲ್ಲೊಂದಾದ ಶ್ರೀ ಕಂಚಿಕಾಮಾಕ್ಷಿಯಮ್ಮ ದೇವಾಲಯದ 18ನೇ ವರ್ಷದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವದ ಧಾರ್ಮಿಕ ವಿಧಿ-ವಿಧಾನಗಳು ಕೇರಳದ ಪಯ್ಯನೂರ್‍ನ ಶ್ರೀ ಈಶ್ವರಿ ನಂಬೂದರಿ ಅವರ ನೇತೃತ್ವದಲ್ಲಿ ಏಪ್ರಿಲ್, 18 ಮತ್ತು 19 ರಂದು ನಡೆಯಲಿದೆ. ಏಪ್ರಿಲ್, 18 ರಂದು ಸಂಜೆ 6 ಗಂಟೆಗೆ ಆಚಾರ್ಯರ ಆಗಮನ, ದೇವಾಲಯದಲ್ಲಿ ಪುಣ್ಯಾಹ ಶುದ್ಧಿ, ದೇವಿ ಪೂಜೆ, ಸುದರ್ಶನ ಹೋಮ ಮತ್ತು ಪ್ರಸಾದ ವಿತರಣೆ ನಡೆಯಲಿದೆ. ಏಪ್ರಿಲ್, 19 ರಂದು ಬೆಳಗ್ಗೆ 7 ಗಂಟೆಗೆ ಮಹಾ ಗಣಪತಿ ಹೋಮ, ಐಕ್ಯಮತ್ಯ ಸುಕ್ರದ ಹೋಮ ಪೂಜೆ, ಕಳಸ ಪೂಜೆ, ದೇವಿಗೆ ಅಭಿಷೇಕ, ಅಲಂಕಾರ ಪೂಜೆ ಹಾಗೂ ಮಹಾ ಪೂಜೆ ನಡೆಯಲಿದೆ. ನಂತರ ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿದೆ.

Exit mobile version