https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

News, Informatin , Enteetinement and Advertisement
19/06/202519/06/2025nadubadenews@gmail.comLeave a Comment on ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ
Spread the love
ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

ಮಡಿಕೇರಿ ಜೂ.19(nadubadenews):- ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು. ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು. ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.

ನಂತರ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ಈ ಬಾರಿ ಮುಂಗಾರು ಬೇಗ ಆರಂಭವಾಗಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.
ಅಂಗನವಾಡಿ, ಶಾಲಾ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿಗತಿ ಬಗ್ಗೆ ಕೂಡಲೇ ವರದಿ ನೀಡಬೇಕು. ಸುಸ್ಥಿತಿಯಲ್ಲಿರದ ಶಾಲಾ, ಕಾಲೇಜು, ಅಂಗನವಾಡಿ ಕಟ್ಟಡ ಸಂಬಂಧ ಅಂದಾಜುಪಟ್ಟಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಹವಾಮಾನ ಇಲಾಖೆ ಹೊರಡಿಸುವ ಮಾಹಿತಿ ಹಂಚಿಕೊಳ್ಳಬೇಕು. ಅತೀವೃಷ್ಟಿಯಿಂದ ಮನೆ, ಮತ್ತಿತರ ಹಾನಿ ಸಂಭವಿಸಿದಲ್ಲಿ ಕೂಡಲೇ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ತಹಶೀಲ್ದಾರರು ಮತ್ತು ತಾ.ಪಂ ಇಒಗಳ ಜೊತೆ ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅಹವಾಲಿಗೆ ಸ್ಪಂದಿಸುವಂತೆ ನಿರ್ದೇಶನ ನೀಡಿದರು.

ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಶೀಲ್ದಾರ್ ಕೃಷ್ಣಮೂರ್ತಿ, ತಾ.ಪಂ.ಇಒ ಪರಮೇಶ ಇತರರು ಇದ್ದರು.

Post navigation

ಬೆಂಗಳೂರ್‌ ಸಮಾಜಕ್‌ 7ಏಕ್ರೆ ನೇಡಿತಂದ ಅಜ್ಜಿಕುಟ್ಟಿರ ಪೊನ್ನಣ್ಣ ಅಯಿಂಗಕ್‌ ನಲ್ಲಾಮೆ
ಕೊಡಗು ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾದ ನಾಪಂಡ ರವಿಕಾಳಪ್ಪ ಅವರಿಗೆ ಅಭೀನಂದನೆಗಳು

Related Posts

 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

01/06/202501/06/2025nadubadenews@gmail.com
ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕ ಪೊನ್ನಣ್ಣ ಅವರಿಗೆ ಶುಭಾಷಯಗಳು

ಎರಡು ವರ್ಷ ಪೂರೈಸಿದ ಸರ್ಕಾರ ಮತ್ತು ಶಾಸಕ ಪೊನ್ನಣ್ಣ ಅವರಿಗೆ ಶುಭಾಷಯಗಳು

16/05/202516/05/2025nadubadenews@gmail.com
ಅತ್ಯುತ್ತಮ ಬಡ್ಜೆಟ್‌ನೊಂದಿಗೆ, ಕೊಡಗಿಗೆ ಸಿಂಹಪಾಲು:  ಮಂಥರ್‌ ಗೌಡ ಸಂತಸ

ಅತ್ಯುತ್ತಮ ಬಡ್ಜೆಟ್‌ನೊಂದಿಗೆ, ಕೊಡಗಿಗೆ ಸಿಂಹಪಾಲು:  ಮಂಥರ್‌ ಗೌಡ ಸಂತಸ

07/03/202507/03/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version