ಮಡಿಕೇರಿ ಏ.21: ಕೊಡಗು ಪ್ರೆಸ್ ಕ್ಲಬ್ ಆಶ್ರಯದಲ್ಲಿ ಈ ತಿಂಗಳ 23ರ ಬುಧವಾರದಂದು ಕೊಡಗು ವಿಶ್ವವಿದ್ಯಾಲಯಕ್ಕೆ ಸಂಬಂದಿಸಿದ ಸಾಧಕ ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮಡಿಕೇರಿ ಪತ್ರಿಕಾ ಭವನದಲ್ಲಿ ಅಂದು ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರುಗಳು ಮಾಜಿ ಶಾಸಕರುಗಳು ರಾಜಕೀಯ ಪಕ್ಷಗಳ ಪ್ರಮುಖರು ಸಂಘ ಸಂಸ್ಥೆಗಳ ಪದಾಧಿಕಾರಿಗಳು ಶಿಕ್ಷಣ ತಜ್ಞರು ಸಂವಾದದಲ್ಲಿ ಪಾಲ್ಗೊಳ್ಳುವರು . ಕೊಡಗು ವಿಶ್ವವಿದ್ಯಾಲಯಕ್ಕೆ ಸಂಬಂದಿಸಿದ ಸಮಸ್ಯೆಗಳನ್ನು , ಗೊಂದಲಗಳನ್ನು ನೇರವಾಗಿ ಕೇಳಿ , ಚರ್ಚಿಸಿ ಪರಿಹರಿಸಿಕೊಳ್ಳಬಹುದು ಎಂದು ಆಯೋಜಕರು ತಿಳಿಸಿದ್ದಾರೆ.