ಮಡಿಕೇರಿ ಏ.16 : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಬೆಳ್ಳಿಮಹೋತ್ಸವದ ಸಂಭ್ರಮದ ಹಿನ್ನೆಲೆಯಲ್ಲಿ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ ಮಹಿಳಾ ತಂಡಗಳ ನಡುವೆ ಹಾಕಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಏ.21 ರಿಂದ ಮಹಿಳೆಯರ 5ಎ ಸೈಡ್ ಹಾಕಿ ಉತ್ಸವ ಆರಂಭಗೊಳ್ಳಲಿದೆ ಎಂದು ಮುದ್ದಂಡ ಹಾಕಿ ಉತ್ಸವ ಸಮಿತಿಯ ಅಧ್ಯಕ್ಷ ಮುದ್ದಂಡ ರಶಿನ್ ಸುಬ್ಬಯ್ಯ ತಿಳಿಸಿದ್ದಾರೆ.
ಮುದ್ದಂಡ ಹಾಕಿ ಉತ್ಸವದ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ಪಂದ್ಯಾವಳಿ ಉದ್ಘಾಟನೆಗೊಳ್ಳಲಿದೆ. ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ವಿಜೇತ ಹಿರಿಯ ಕಲಾವಿದೆ ಐಮುಡಿಯಂಡ ರಾಣಿ ಮಾಚಯ್ಯ ಹಾಗೂ ರಾಷ್ಟ್ರೀಯ ಬಾಸ್ಕೆಟ್‌ಬಾಲ್ ಆಟಗಾರ್ತಿ ಮಂಡೇಪಂಡ ಪುಷ್ಪ ಕುಟ್ಟಣ್ಣ ಪಾಲ್ಗೊಳ್ಳಲಿದ್ದು, 56 ಕೊಡವ ಒಕ್ಕಡ ಮಹಿಳಾ ತಂಡಗಳ ನಡುವೆ ರೋಚಕ ಪಂದ್ಯಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದ್ದಾರೆ .