ಮಡಿಕೇರಿ, ನ.28: ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ಕೇರಳ ರಾಜ್ಯ ಲಾಟರಿಯನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿರುತ್ತಾರೆ.
ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಕೇರಳ ರಾಜ್ಯ ಲಾಟರಿಯನ್ನು ಮಾರಾಟ ಮಾಡುವ ಬಗ್ಗೆ ನಮ್ಮ ಕಛೇರಿ/ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ಕರ್ನಾಟಕ ರಾಜ್ಯದಲ್ಲಿ ಲಾಟರಿ ಮಾರಾಟವನ್ನು ನಿಷೇದಿಸಲಾಗಿದ್ದು, ಅಕ್ರಮವಾಗಿ ಕೇರಳ ರಾಜ್ಯ ಲಾಟರಿ ಮಾರಾಟವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ರವಿ, ಡಿವೈಎಸ್ಪಿ, ಸೆನ್ ಪೊಲೀಸ್ ಠಾಣೆ & ಸಿಬ್ಬಂದಿಗಳು ಮತ್ತು ಶ್ರೀ ಮೇದಪ್ಪ.ಐ.ಪಿ, ಪಿಐ, ಡಿಸಿಆರ್ಬಿ, ಕೊಡಗು ಜಿಲ್ಲೆ & ಸಿಬ್ಬಂದಿಗಳ ತಂಡ ಮಾಹಿತಿ ಸಂಗ್ರಹಿಸಿ ತನಿಖೆ ಕೈಗೊಂಡು ದಿನಾಂಕ: 23-11-2024 ರಂದು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪ ದೋಹಾ ಕಿಂಗ್ ಹೋಟೇಲ್ ಮುಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಕೇರಳ ರಾಜ್ಯ ಲಾಟರಿಯನ್ನು ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿ ಸುಂಠಿಕೊಪ್ಪ ನಿವಾಸಿಯಾದ ಆರೋಪಿ ಲತೀಫ್, 40 ವರ್ಷ, ಎಂಬಾತನನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ ಹಾಗೂ ರೂ. 40/- ಮೌಲ್ಯದ 1800 ಸಂಖ್ಯೆಯ ಲಾಟರಿ ಟಿಕೆಟ್ಗಳನ್ನು ವಶಪಡಿಸಕೊಳ್ಳಲಾಗಿದೆ.
ಸದರಿ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಶ್ರೀ ಕೆ. ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ರವರು ಶ್ಲಾಘಿಸಿರುತ್ತಾರೆ.
ವಿಶೇಷ ಸೂಚನೆ: ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಮನೆಯ ಸುತ್ತ-ಮುತ್ತಲಿನ ಪ್ರದೇಶಗಳಲ್ಲಿ ಯಾವುದೇ, ಅನುಮಾನಸ್ಪದ ವ್ಯಕ್ತಿಗಳು ಹಾಗೂ ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ/ ತುರ್ತು ಸಹಾಯವಾಣಿ 112 ಕ್ಕೆ ಕರೆ ಮಾಡಿ ಮಾಹಿತಿ ನೀಡುವಂತೆ ಹಾಗೂ ಕೆ.ಎಸ್.ಪಿ ತಂತ್ರಾಶದ ಮೂಲಕ ಮಾಹಿತಿ ನೀಡಿ ಸಹಕರಿಸುವಂತೆ ಸಾರ್ವಜನಿಕರಲ್ಲಿ ಕೋರುತೇವೆ. ಅಕ್ರಮ ಚಟುವಟಿಕೆಗಗಳ ಕುರಿತು ಮಾಹಿತಿ ಒದಗಿಸುವವರ ವಿವರಗಳನ್ನು ಬಹಿರಂಗಪಡಿಸುವುದಿಲ್ಲ.