https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

News, Informatin , Enteetinement and Advertisement
25/03/202525/03/2025nadubadenews@gmail.comLeave a Comment on ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ
Spread the love
ಹೋಂ ಸ್ಟೇ ನೋಂದಣಿ ಮಾಡದಿದ್ದರೆ, ಕಾನೂನು ಕ್ರಮ

ಮಡಿಕೇರಿ ಮಾ.25:- ಸರ್ಕಾರದ ಆದೇಶದನ್ವಯ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂ-ಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸುವುದು ಕಡ್ಡಾಯವಾಗಿದ್ದು, ಈ ಸಂಬಂಧ ಹೋಂ-ಸ್ಟೇ ಮಾಲೀಕರಿಗೆ ಸಾಕಷ್ಟು ಕಾಲಾವಕಾಶ ನೀಡಿದರೂ ಬಹಳಷ್ಟು ಹೋಂ-ಸ್ಟೇಗಳು ನೋಂದಣಿಯಾಗಿರುವುದಿಲ್ಲ. ಇದನ್ನು ಜಿಲ್ಲಾಡಳಿತವು ಗಂಭೀರವಾಗಿ ಪರಿಗಣಿಸಿದ್ದು, ನೋಂದಣಿಯಾಗದ ಹೋಂ-ಸ್ಟೇಗಳು ಕಡ್ಡಾಯವಾಗಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹಾಗೆಯೇ ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಗೊಳ್ಳದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ-ಸ್ಟೇಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಲಾಗಿದೆ.
ಪ್ರವಾಸೋದ್ಯಮ ಇಲಾಖೆಯಿಂದ ಈಗಾಗಲೇ ಪರವಾನಿಗೆ ಪಡೆದು ಕಾರ್ಯ ನಿರ್ವಹಿಸುತ್ತಿರುವ ಮತ್ತು ಪರವಾನಿಗೆ ಅವಧಿಯು 5 ವರ್ಷಗಳಿಗೆ ಮುಕ್ತಾಯಗೊಳ್ಳುತ್ತಿರುವ ಹೋಂ-ಸ್ಟೇಗಳು ಪರವಾನಿಗೆಯನ್ನು ನವೀಕರಿಸುವಂತೆ ಈ ಮೂಲಕ ತಿಳಿಸಲಾಗಿದೆ. ಹೋಂ-ಸ್ಟೇಗಳ ನೋಂದಣಿಗಾಗಿ ಪ್ರವಾಸೋದ್ಯಮ ಇಲಾಖೆಯು ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಅಂತರ್ಜಾಲ ತಾಣ https://kttf.karnatakatourism.org/login ಮುಖಾಂತರ ಆನ್‍ಲೈನ್‍ನಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಲಾಗಿದೆ.
ಹೋಂ-ಸ್ಟೇ ಪರಿವೀಕ್ಷಣೆಗಾಗಿ ಅಧಿಕಾರಿಗಳು ಭೇಟಿ ನೀಡಿದಾಗ ಹೋಂ-ಸ್ಟೇ ಪ್ರಮಾಣಪತ್ರ ಅಥವಾ ಹೋಂ-ಸ್ಟೇ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ದಾಖಲಾತಿಯನ್ನು ಹಾಜರುಪಡಿಸುವುದು. ಇಲ್ಲವಾದಲ್ಲಿ ಹೋಂ-ಸ್ಟೇ ಜಾಗದ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುವುದು. ಮಾಹಿತಿ ಇಲ್ಲದೆ ಅನಧೀಕೃತವಾಗಿ ನಡೆಸುತ್ತಿರುವಂತಹ ಹೋಂ-ಸ್ಟೇಗಳ ಬಗ್ಗೆ ಸಾರ್ವಜನಿಕರು ದೂರು/ ಮಾಹಿತಿ ಇದ್ದಲ್ಲಿ ಅವುಗಳ ವಿವರಗಳನ್ನು ಪತ್ರ ಮುಖೇನ ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ 571201 ದೂರವಾಣಿ ಸಂಖ್ಯೆ:08272-200519 ಅಥವಾ ಈ-ಮೇಲ್ : ddkodagutourism@gmail.com ಗೆ ತಿಳಿಸಬಹುದು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹೋಟೆಲ್, ರೆಸ್ಟೋರೆಂಟ್, ರೆಸಾರ್ಟ್, ಟೂರ್ಸ್ ಅಂಡ್ ಟ್ರಾವೆಲ್ ಏಜೆನ್ಸಿ ಹಾಗೂ ಮನರಂಜನಾ ಪಾರ್ಕ್‍ಗಳ ಉದ್ದಿಮೆದಾರರುಗಳು ಕರ್ನಾಟಕ ಪ್ರವಾಸೋದ್ಯಮ ಇಲಾಖೆಯ ವೆಬ್‍ಸೈಟ್ http://kttf.karnatakatourism.org/ನಲ್ಲಿ ತಮ್ಮ ಸಂಸ್ಥೆಯನ್ನು ನೊಂದಣಿ ಮಾಡುವಂತೆ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಅನಿತಾ ಭಾಸ್ಕರ್ ಅವರು ಕೋರಿದ್ದಾರೆ.

Post navigation

25ನೇ ಹಾಕಿ ನಮ್ಮೆ ಮುದ್ದಂಡ ಕಪ್‌ರ  ತಿರಿ ಕತ್ತ್‌ಚಿಟ್ಟ ಖನ ಪಟ್ಟವು…
ಬೆಂಗಳೂರ್‌ ಕೊಡವ ಸಮಾಜ ಪೈಪೋಟಿ ರಂಗ್‌ : ಓಟ್‌ಕಳತ್‌ ಬಾಳೆಯಡ ಕರುಣ್‌ ಕಾಳಪ್ಪ

Related Posts

ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

ಬಾಂಗ್ಲಾ ನುಸುಳುಕೋರರು ಸೇರಿದಂತೆ, ಕೊಡಗಿನ ಹಲವು ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಗೃಹಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್  ಒಡೆಯರ್

15/07/202515/07/2025nadubadenews@gmail.com
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ ನಾಡ್‌ಲ್‌ ನಾಳ್…

08/08/202514/08/2025nadubadenews@gmail.com
​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…

​ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ…

15/09/202515/09/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version