https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button

“ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದಲ್ಲಿ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಲು ಡಿಡಿಪಿಐ ಮನವಿ…

News, Informatin , Enteetinement and Advertisement
22/05/202522/05/2025nadubadenews@gmail.comLeave a Comment on “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮದಲ್ಲಿ, ಸರ್ಕಾರಿ ಶಾಲೆಗಳ ಬಲವರ್ಧನೆಗೆ ಸಹಕರಿಸಲು ಡಿಡಿಪಿಐ ಮನವಿ…
Spread the love

ಕುಶಾಲನಗರ, ಮೇ, 22(Nadubade News) (ಟಿ.ಜಿ. ಪ್ರೇಮ್‌ಕುಮಾರ್): ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿ, ಶಾಲಾ ಅಭಿವೃದ್ಧಿ ಹಾಗೂ ಬಲವರ್ಧನೆಗಾಗಿ ಸರ್ಕಾರ ರೂಪಿಸಿರುವ “ನಮ್ಮ ಶಾಲೆ ನಮ್ಮ ಜವಾಬ್ದಾರಿ”  ಎಂಬ ವಿನೂತನ ಪರಿಕಲ್ಪನೆಯ ಕಾರ್ಯಕ್ರಮದಡಿ  ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಶ್ರೋಯೋಭಿವೃದ್ಧಿಗಾಗಿ   ಶಾಲೆಯಲ್ಲಿ ಕಲಿತ ಹಿರಿಯ ವಿದ್ಯಾರ್ಥಿಗಳು, ಪೋಷಕರು, ನಾಗರಿಕರು  ಹಾಗೂ ದಾನಿಗಳು ಹೆಚ್ಚಿನ ಸಹಕಾರ ಮತ್ತು ಪ್ರೋತ್ಸಾಹ ನೀಡಬೇಕು ಎಂದು ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ( ಅಭಿವೃದ್ಧಿ ) ಸಿ.ರಂಗಧಾಮಪ್ಪ ಮನವಿ ಮಾಡಿದ್ದಾರೆ.

           ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಸೋಮವಾರಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಪ್ರಧಾನ ಮಂತ್ರಿ ಪೋಷಣ್ ಶಕ್ತಿ ಅಭಿಯಾನದ ( ಮಧ್ಯಾಹ್ನದ ಬಿಸಿಯೂಟ ಯೋಜನೆ) ವತಿಯಿಂದ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯಕ್ರಮದ ಯೋಜನೆಯ ರೂಪುರೇಷೆ ಕುರಿತು ಸಮುದಾಯದ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಕುರಿತು ಏರ್ಪಡಿಸಿದ್ದ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

    ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಹಿರಿಯ/ ಹಳೆಯ ವಿದ್ಯಾರ್ಥಿಗಳು , ಸಂಘ- ಸಂಸ್ಥೆಗಳು, ದಾನಿಗಳು, ಪೋಷಕರು,  ಗ್ರಾಮಸ್ಥರು ಹಾಗೂ ನಾಗರಿಕರು ತಮ್ಮ ತಮ್ಮ ಊರು ಮತ್ತು ತಮ್ಮ ಸುತ್ತಲಿನ‌ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

“ನಮ್ಮ ಶಾಲೆ ನಮ್ಮ ಜವಾಬ್ದಾರಿ”ಯ ಕಾರ್ಯಕ್ರಮವು ಸರ್ಕಾರದ ಕನಸಿನ ಕ್ರಾಂತಿಕಾರಕ ಹಾಗೂ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ‌ಈ ಕಾರ್ಯಕ್ರಮದ ಮೂಲಕ ಸರ್ಕಾರಿ ಶಾಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಯೋಜನೆ/ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ಡಿಡಿಪಿಐ ರಂಗಧಾಮಪ್ಪ  ಮಾಹಿತಿ ನೀಡಿದರು.

     ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು.

    ನಮ್ಮ ಶಾಲೆ- ನಮ್ಮ ಜವಾಬ್ದಾರಿ” ಕಾರ್ಯಕ್ರಮವು ಸರ್ಕಾರಿ ಶಾಲೆಗಳ ದಾಖಲಾತಿಯನ್ನು ಹೆಚ್ಚಿಸುವ ಮೂಲಕ ಜನರ ಸಹಭಾಗಿತ್ವದಲ್ಲಿ ಶಾಲಾ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ಸಾಮಾಜಿಕ ಕಳಕಳಿಯುಳ್ಳವರು ಸರ್ಕಾರಿ ಶಾಲೆಗಳಿಗೆ ಹಲವು ರೀತಿಯಲ್ಲಿ ವಿವಿಧ ಕೊಡುಗೆಗಳನ್ನು ನೀಡುತ್ತಾ ಬಂದಿದ್ದಾರೆ .ಸರ್ಕಾರವು ಸರ್ಕಾರಿ ಶಾಲಾ ಮಕ್ಕಳಿಗೆ‌ ನೀಡುತ್ತಿರುವ ಅನೇಕ ಸೌಲಭ್ಯಗಳ ಕುರಿತು ಡಿಡಿಪಿಐ ರಂಗಧಾಮಪ್ಪ ಮಾಹಿತಿ ನೀಡಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಕುರಿತು ಮಾಹಿತಿ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಭಾಗ್ಯಮ್ಮ ಮಾತನಾಡಿ ಸರ್ಕಾರಿ ಶಾಲೆ ಗಳ ಅಭಿವೃದ್ಧಿ ಕುರಿತು ದೊಡ್ಡ ಗುರಿಯನ್ನು ಹೊಂದಲಾಗಿದೆ. ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡುವಂತೆ ಮನವಿ ಮಾಡಿದರು.

      ಜಿಲ್ಲಾ ಅಕ್ಷರ ದಾಸೋಹ ಯೋಜನೆಯ ಶಿಕ್ಷಣಾಧಿಕಾರಿ ಹೇಮಂತ್ ರಾಜ್ , ಸರ್ಕಾರ ಮಕ್ಕಳ ಕಲಿಕೆಯನ್ನು ಉತ್ತಮ ಪಡಿಸುವ ದಿಸೆಯಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ವುಳ್ಳ ಆಹಾರ ನೀಡುವ ಉದ್ದೇಶದಿಂದ ಬಿಸಿಯೂಟ ಯೋಜನೆ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದೆ ಎಂದರು.

     ಮಕ್ಕಳ ಶೈಕ್ಷಣಿಕ ಕಲಿಕಾ ಮಟ್ಟವನ್ನು ವೃದ್ಧಿಸಲು ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದ ಅವರು ಶಾಲೆಗಳಲ್ಲಿ ಮಕ್ಕಳಿಗೆ  ಮೊಟ್ಟೆ, ಹಾಲು, ಬಾಳೆಹಣ್ಣನ್ನು ಒಳಗೊಂಡಂತೆ  ಬಿಸಿಯೂಟದೊಂದಿಗೆ ಅವರನ್ನು ಹಸಿವಿನಿಂದ ಬಳಲದಂತೆ ಪೌಷ್ಟಿಕಾಂಶವುಳ್ಳ ಆಹಾರ ನೀಡುವ ಮೂಲಕ ಮಕ್ಕಳ ಕಲಿಕೆಗೆ ವಿಶೇಷ ಗಮನ ಹರಿಸಲಾಗುತ್ತಿದೆ ಎಂದರು.

   ಸಮಗ್ರ ಶಿಕ್ಷಣ ಕರ್ನಾಟಕ ದ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ಎಂ ಕೃಷ್ಣಪ್ಪ ಹಾಗೂ ತಾಲ್ಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಜಿ.ಎಂ.ಹೇಮಂತ್ ಶೈಕ್ಷಣಿಕ ಮಾಹಿತಿ ನೀಡಿದರು.

ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪಿ.ನವೀನ್ ಕುಮಾರ್, ಶಾಲೆಯ ಶೈಕ್ಷಣಿಕ ಗುಣಮಟ್ಟದ ಕಲಿಕೆ ಹಾಗೂ ನಮ್ಮ  ನಮ್ಮ ಜವಾಬ್ದಾರಿ ಕುರಿತು ಮಾಹಿತಿ ಹಂಚಿಕೊಂಡರು.

ಕುಶಾಲನಗರ ಜೆ.ಸಿ.ಐ.ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷ ಎಂ.ಜೆ.ರಜನೀಕಾಂತ್ ಮಾತನಾಡಿ, ‌ಸರ್ಕಾರಿ ಶಾಲೆಗಳ ಪ್ರಗತಿಗೆ ಎಲ್ಲರೂ ಸಹಕರಿಸಬೇಕು ಎಂದು‌ ಮನವಿ ಮಾಡಿದರು.

ಕೂಡಿಗೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಹಂಡ್ರಂಗಿ ಜೆ. ನಾಗರಾಜ್, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಸಂಘಟನಾ ಕಾರ್ಯದರ್ಶಿ ದಯಾನಂದ ಪ್ರಕಾಶ್, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಸರ್ಕಾರಿ ಜೂನಿಯರ್ ಕಾಲೇಜಿನ ಉಪ ಪ್ರಾಂಶುಪಾಲರಾದ ಪರಮೇಶ್ವರಪ್ಪ,ದೈಹಿಕ ಶಿಕ್ಷಣ ಶಿಕ್ಷಕ ಡಾ ಸದಾಶಿವಯ್ಯ ಎಸ್.ಪಲ್ಲೇದ್, ಸಿ ಆರ್ ಪಿ ಟಿ.ಈ.ವಿಶ್ವನಾಥ್,  ಕುಶಾಲನಗರ ಪಿಎಂ ಶ್ರೀ ಶಾಲೆಯ ಮುಖ್ಯ ಶಿಕ್ಷಕಿ ಎಂ.ಎಂ.ಭಾರತಿ, ಚಿಂತನ ಫೌಂಡೇಶನ್ ನ ಸ್ವಯಂ ಸೇವಕರಾದ ಸುನಂದಕುಮಾರ್, ಕೂಡಿಗೆ ಗೋವಿಂದರಾಜ್, ಸೇರಿದಂತೆ ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ಪೋಷಕರು, ನಾಗರಿಕರು ,ಶಾಲಾ ಶಿಕ್ಷಕರು ಇದ್ದರು.

  ಶಿಕ್ಷಕಿ ಎಂ.ತುಳಸಿ ಕಾರ್ಯಕ್ರಮ ನಿರ್ವಹಿಸಿದರೆ, ಶಿಕ್ಷಕ  ಎಸ್.ಎನ್.ವೇಣುಗೋಪಾಲ್ ವಂದಿಸಿದರು.

ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕೆ ಶ್ಲಾಘನೆ:

ಮುಖ್ಯ ಶಿಕ್ಷಕರಿಗೆ ಅಭಿನಂದನೆ:

ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಕಳೆದ ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಲಭಿಸಿರುವುದಕ್ಕೆ ಶಾಲೆಯ ಮುಖ್ಯ ಶಿಕ್ಷಕ‌ ಪಿ.ನವೀನ್ ಕುಮಾರ್ ಹಾಗೂ ಶಿಕ್ಚಕರ ಪರಿಶ್ರಮದ ಬಗ್ಗೆ ಶ್ಲಾಘಿಸಿದರು.

   ಇದೇ ವೇಳೆಯಲ್ಲಿ ಕುಶಾಲನಗರ ಬಾಲಕಿಯರ ಸರ್ಕಾರಿ ಪ್ರೌಢಶಾಲೆಗೆ ಕಳೆದ ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಡಿಡಿಪಿಐ ರಂಗಧಾಮಪ್ಪ ಹಾಗೂ ಬಿಇಓ ಭಾಗ್ಯಮ್ಮ ಶಾಲೆಯ ಮುಖ್ಯೋಪಾಧ್ಯಾಯ ಪಿ.ನವೀನ್ ಕುಮಾರ್, ಅವರನ್ನು ಶಾಲು ಹೊದಿಸಿ ಸನ್ಮಾನಿಸಿದರು.

Post navigation

ರಾಜ್ಯಮಟ್ಟದ ಮೊಗೇರ ಕ್ರಿಕೆಟ್ ಕಪ್  ಡೋಮಿನೇಟರ್ ಇಲೆವೆನ್ ಮಾರ್ಗೋಲ್ಲಿ ಚಾಂಪಿಯನ್…
ಐಇಸಿ ಚಟುವಟಿಕೆಗಳಿಗಾಗಿ ಸ್ವಸಹಾಯ ಗುಂಪು ಸದಸ್ಯರಿಂದ ಅರ್ಜಿ ಆಹ್ವಾನ

Related Posts

ಕರ್ನಾಟಕ ಕಾನೂನು ವಿವಿ 4ನೇಸ್ಥಾನವೀರಾಜಪೇಟೆಯ ವೆಂಕಟೇಶಕಾಮತ್

ಕರ್ನಾಟಕ ಕಾನೂನು ವಿವಿ 4ನೇಸ್ಥಾನವೀರಾಜಪೇಟೆಯ ವೆಂಕಟೇಶಕಾಮತ್

09/07/202509/07/2025nadubadenews@gmail.com
ಯೋಗ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ…

ಯೋಗ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಅಭಿಯಾನ…

07/06/202507/06/2025nadubadenews@gmail.com
ಉನ್ನತ ಅಧಿಕಾರಿಗಳಾಗುವತ್ತ ವಿದ್ಯಾರ್ಥಿಗಳು ಗಮನ ಹರಿಸಿ; ಏಳ್‌ನಾಡ್‌ ಒತ್ತೋರ್ಮೆಕೂಟದಲ್ಲಿ DFO ಕೊಚ್ಚೆರ ನೆಹರು ಕಿವಿಮಾತು

ಉನ್ನತ ಅಧಿಕಾರಿಗಳಾಗುವತ್ತ ವಿದ್ಯಾರ್ಥಿಗಳು ಗಮನ ಹರಿಸಿ; ಏಳ್‌ನಾಡ್‌ ಒತ್ತೋರ್ಮೆಕೂಟದಲ್ಲಿ DFO ಕೊಚ್ಚೆರ ನೆಹರು ಕಿವಿಮಾತು

06/08/202506/08/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version