ಮಡಿಕೇರಿ ಮೇ.22 (Nadubade News): ಆಪರೇಷನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಾಳೆ ಮಡಿಕೇರಿ ನಗರದಲ್ಲಿ ಬೃಹತ್ ವಿಜಯೋತ್ಸವ ಮೆರವಣಿಗೆ ಮತ್ತು ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ಸಂಚಾಲಕ ಕೆ ಕೆ ದಿನೇಶ್ ಕುಮಾರ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಬೆಳಿಗ್ಗೆ 10:30 ಗಂಟೆಗೆ ಮಡಿಕೇರಿ ನಗರದ ಬನ್ನಿಮಂಟಪದಿಂದ ಗಾಂಧಿ ಮೈದಾನದವರೆಗೆ ಬೃಹತ್ ತಿರಂಗಾ ಯಾತ್ರೆ ಮತ್ತು ಗಾಂಧಿ ಮೈದಾನದಲ್ಲಿ ಸಭಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಕರ್ನಲ್ ಚೊಂದಮ್ಮ ಅವರು ವಹಿಸಲಿದ್ದು, ವೇದಿಕೆಯಲ್ಲಿ ನಿವೃತ್ತ ಸೇನಾಧಿಕಾರಿಗಳು ಉಪಸ್ಥಿತಿ ಇರಲಿದ್ದು ಕಾರ್ಯಕ್ರಮಕ್ಕೆ ಶೋಭೆ ತರಲಿದ್ದಾರೆ ಎಂದು ದಿನೇಶ್ ಕುಮಾರ್ ತಿಳಿಸಿದ್ದಾರೆ.