https://nadubadenews.com
Skip to content
nadubadenews.com

nadubadenews.com

KODAVA & KANNADA

  • About us
  • Contact US
  • Privacy Policy
  • Sample Page
  • Terms and Conditions
site mode button
 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

News, Informatin , Enteetinement and Advertisement
01/06/202501/06/2025nadubadenews@gmail.comLeave a Comment on  ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…
Spread the love
 ಮಡಿಕೇರಿಯಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜನ್ಮದಿನೋತ್ಸವ…

ಮಡಿಕೇರಿ. ಜೂ.01 (Nadubade News): ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸರಕಾರಿ  ಪದವಿ ಪೂರ್ವ ಕಾಲೇಜು ಮತ್ತು ಸರಕಾರಿ ಪ್ರೌಢಶಾಲೆ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕ ರಾಜಶ್ರೀ  ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮದಿನೋತ್ಸವ, ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿ ಪ್ರಧಾನ  ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಮಡಿಕೇರಿಯ ಸರಕಾರಿ ಪ್ರೌಢಶಾಲಾ ಸಭಾಂಗಣದಲ್ಲಿ ನ ದಿನಾಂಕ 04.06. 2025ರ ಬುಧವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಕೇಶವ ಕಾಮತ್ ಅವರು  ವಹಿಸಲಿದ್ದು, ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲೆಯ ಹಿರಿಯ ಸಾಹಿತಿಗಳಾದ ನಾಗೇಶ್ ಕಾಲೂರು ರವರು ನಡೆಸಿಕೊಡಲಿದ್ದಾರೆ. ಶ್ರೀಮತಿ ವಿಜಯ ವಿಷ್ಣು ಭಟ್ ದತ್ತಿ ಪ್ರಶಸ್ತಿಯ ಪ್ರಥಮ ವರ್ಷದ ಪುರಸ್ಕೃತರಾದ ಸಾಹಿತಿ ಶ್ರೀಮತಿ ಸ್ಮಿತಾ ಅಮೃತರಾಜ್ ಸಂಪಾಜೆ ಅವರಿಗೆ ಆಕಾಶವಾಣಿಯ ನಿವೃತ್ತ ಉದ್ಘೋಷಕರು, ಸಾಹಿತಿಯೂ ಆದ ಸುಬ್ರಾಯ ಸಂಪಾಜೆ ಅವರು ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

      ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141ನೇ ಜನ್ಮದಿನೋತ್ಸವದ ಸಲುವಾಗಿ ಓರ್ವ ಹಿರಿಯ ಸಾಧಕರನ್ನು ಸನ್ಮಾನಿಸಲಾಗುತ್ತಿದ್ದೆ. ಮಡಿಕೇರಿಯ ಆಕಾಶವಾಣಿಯಲ್ಲಿ 29 ವರ್ಷಗಳ ಸಾರ್ಥಕ ಸೇವೆ ಸಲ್ಲಿಸಿ ಹಲವಾರು ಉತ್ಕೃಷ್ಟ ಗ್ರಂಥಗಳನ್ನು ರಚನೆ ಮಾಡಿದ ಸಾಹಿತಿ ಸುಬ್ರಾಯ ಸಂಪಾಜೆ ಅವರನ್ನು ಗೌರವಿಸಲಾಗುತ್ತಿದೆ. ಸಾಧಕರನ್ನು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾದ ಟಿ.ಪಿ ರಮೇಶ್ ರವರು ಸನ್ಮಾನಿಸಲಿದ್ದಾರೆ. ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕುರಿತು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಎಸ್.ಐ ಮುನಿರ್ ಅಹಮದ್ ರವರು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ದತ್ತಿದಾನಿ ಮತ್ತು ಸಾಹಿತಿಯೂ ಆದ ಶ್ರೀಮತಿ ವಿಜಯ ವಿಷ್ಣು ಭಟ್, ಮಡಿಕೇರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ ಆರ್ ವಿಜಯ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಕೆ ವಿ ಶಶಿಕಲಾ, ಕೊಡಗು ಜಿಲ್ಲಾ ಮಹಿಳಾ ಬರಹಗಾರರ ಸಂಘದ ಅಧ್ಯಕ್ಷರಾದ ಶ್ರೀಮತಿ ಪುದಿಯನೆರವನ ರೇವತಿ ರಮೇಶ್, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಕಡ್ಲೆ ರ ತುಳಸಿ ಮೋಹನ್ ರವರು ಭಾಗವಹಿಸಲಿದ್ದಾರೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವಕೋಶಾಧಿಕಾರಿ ಎಸ್ ಎಸ್ ಸಂಪತ್ ಕುಮಾರ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post navigation

ಓಡಿಯಂಡ ರೋಹಿಣಿ ದೇಚಮ್ಮಂಗ್‌ ನಲ್ಲಾಮೆ
ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣರವರ ಮಧ್ಯಸ್ಥಿಕೆ: ಪ್ರತಿಭಟನೆಯನ್ನು ಅರ್ಧದಲ್ಲೇ ಕೈ ಬಿಟ್ಟ ವಿರಾಜಪೇಟೆ ಪುರಸಭೆ ನೌಕರರು…   

Related Posts

  ವಿಧಾನಸೌಧ  ಮಾರ್ಗದರ್ಶಿ ನಡಿಗೆ, ಐತಿಹಾಸಿಕ ಕಟ್ಟಡದ ಮಹತ್ವ ಸಾರುವ ಉದ್ದೇಶ…

27/05/202527/05/2025nadubadenews@gmail.com
ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್…

ಉಳ್ಳಿಯಡ ಡಾಟಿ ಪೂವಯ್ಯ ಅಯಿಂಗಡ, ನಾಡ್‌ಲ್‌ ನಾಳ್…

21/03/202521/03/2025nadubadenews@gmail.com
     ಹೃದಾಯಘಾತ ತಡೆಯಲು ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಸ್ಟೆಮಿ ಯೋಜನೆ ಸರ್ಕಾರದ ಆದೇಶ

     ಹೃದಾಯಘಾತ ತಡೆಯಲು ಎಲ್ಲಾ ತಾಲೂಕು ಆಸ್ಪತ್ರೆಗಳಿಗೂ ಸ್ಟೆಮಿ ಯೋಜನೆ ಸರ್ಕಾರದ ಆದೇಶ

02/07/202502/07/2025nadubadenews@gmail.com

Leave a Reply Cancel reply

Your email address will not be published. Required fields are marked *

  • Facebook
  • Instagram
  • WhatsApp
  • X
nadubadenews | Theme: News Portal by Mystery Themes.
error: Content is protected !!
WhatsApp us
Go to mobile version