
ಬೆಂಗಳೂರು, ಜೂ.26(nadubadenews): ವಿರಾಜಪೇಟೆ ವಿಧಾನಸಭಾ ವ್ಯಾಪ್ತಿಯ ಕೆ.ಬಾಡಗ ಗ್ರಾಮ ಪಂಚಾಯತಿ ಕಛೇರಿಗೆ ಕಟ್ಟಡ ಖರೀದಿಸಲು ಅನುಮತಿಗಾಗಿ ಇಂದು ಗ್ರಾಮಿಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಮನವಿ ಮಾಡಿದರು.
ಇಂದು ಗ್ರಾಮ ಪಂಚಾಯಿತಿ ಸದಸ್ಯರೊಂದಿ, ಮಾನ್ಯ ಸಚಿವರನ್ನು ಭೇಟಿ ಮಾಡಿದ ಶಾಸಕರು, ಕೆ.ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ, ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡವಿದ್ದು, ಪಂಚಾಯತಿಯಲ್ಲಿ ಲಭ್ಯವಿರುವ ಅನುದಾನದಲ್ಲಿ, ಸದರಿ ಕಟ್ಟಡವನ್ನೇ ಪಂಚಾಯತಿ ಕಛೇರಿಗಾಗಿ ಖರೀದಿಸಲು ಅನುಮತಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ ಬಾಡಗ ಪಂಚಾಯಿತಿ ಅಧ್ಯಕ್ಷರಾದ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯರಾದ ಸಿ ಡಿ ಬೋಪಣ್ಣ ಉಪಸ್ಥಿತರಿದ್ದರು.